ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಪಲ್ಟಿಯಾಗಿ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಸಮೀಪ ಸಂಭವಿಸಿದೆ.
ಸಿರಾ ತಾಲ್ಲೂಕು ಕಳ್ಳಂಬೆಳ್ಳ ಸಮೀಪದ ಚಿಕ್ಕನಹಳ್ಳಿ ಸೇತುವೆ ಬಳಿ ಖಾಸಗಿ ಬಸ್ ಪಲ್ಟಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಬಸ್ ವೇಗವಾಗಿ ಬರುತ್ತಿತ್ತು ಎಂದು ಹೇಳಲಾಗಿದೆ. ಡಿ.2ರಂದು ಬೆಳಗಿನ ಜಾವ 4.30ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮೃತರನ್ನು ಪ್ರಿಯಾಂಕ, ಪೂರ್ವಿ ಮತ್ತು ಶುಭಾಳಿ ಸಿಂಗ್ ಎಂದು ಗುರುತಿಸಲಾಗಿದ್ದು, ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಇಬ್ಬರು ಗಾಯಾಳುಗಳು ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಳಿದ ಗಾಯಾಳುಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.