Sunday, December 22, 2024
Google search engine
Homeಮುಖಪುಟಡಿಸೆಂಬರ್ 14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ

ಡಿಸೆಂಬರ್ 14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ

ತುಮಕೂರು ಹೊರವಲಯದ ಅಗಲಕೋಟೆಯಲ್ಲಿರುವ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಂ.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಡಿ.14ರಂದು ಬೆಳಿಗ್ಗೆ 10-30ಕ್ಕೆ ಸಾಹೇ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಕುಲಪತಿ ಡಾ.ಕೆ.ಬಿ.ಲಿಂಗೇಗೌಡ ತಿಳಿಸಿದರು.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವೆ ಹಾಗೂ ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ಅಧ್ಯಕ್ಷ ಪ್ರೊ. ಟಿ.ಜಿ.ಸಿತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಬೋಧಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದರು.

ಕುಲಸಚಿವ ಡಾ.ಎಂ.ಝೆಡ್ ಕುರಿಯನ್ ಮಾತನಾಡಿ, ಸಾಹೇ ಬೆಳೆದು ಬಂದ ಹಾದಿ ಹಾಗೂ ನ್ಯಾಕ್ ಎ+ ಪಡೆದಿರುವ ಕುರಿತು ಮಾಹಿತಿಯನ್ನು ನೀಡಿದರು. ಮುಂದಿನ ದಿನಗಳಲ್ಲಿ ಸಾಹೇ ವಿವಿಯು ಅಂತಾರಾಷ್ಟಿçÃಯ ರ‍್ಯಾಂಕ್ ಪಟ್ಟಿಯಲ್ಲಿ ಬರುವ ಎಲ್ಲಾ ರೀತಿಯ ಪ್ರಯತ್ನಗಳು ನಡೆಸುತ್ತಿದೆ ಎಂದರು.

ಇತ್ತೀಚೆಗೆ ಅಮೆರಿಕಾದ ಅವಲಾನ್ ವೈದ್ಯಕೀಯ ವಿವಿಯೊಂದಿಗೆ ಸಾಹೇ ವಿವಿ ಒಪ್ಪಂದ ನಡೆಸಿತ್ತು. ಅದರ ಒಪ್ಪಂದದ ಪ್ರಕಾರ ಮುಂದಿನ ಜನವರಿ ಮಾಹೆಯಲ್ಲಿ ವೈದ್ಯಕೀಯ ಆನ್‌ಲೈನ್ ತರಗತಿಗಳನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅವಲಾನ್ ವಿವಿಯ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ಸಾಹೇ ವಿವಿಯಲ್ಲಿ ಆನ್‌ಲೈನ್ ಮೂಲಕ ಬೋಧನಾ ಮತ್ತು ಪ್ರಾಯೋಗಿಕ ತರಗತಿಗಳು ಪಡೆದುಕೊಳ್ಳುತ್ತಾರೆ ಎಂದು ಸಾಹೇ ವಿವಿಯ ಕುಲಾಧಿಪತಿ ಸಲಹೆಗಾರ ಡಾ.ವಿವೇಕ್ ವೀರಯ್ಯ ತಿಳಿಸಿದರು.

ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಲು ಶೇ.80ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿರುತ್ತಾರೆ. ಅತೀ ಹೆಚ್ಚು ರ‍್ಯಾಂಕ್ ಪಡೆದವರಲ್ಲಿ ಅವರೇ ಮೇಲುಗೈ. ಕಳೆದ ಎರಡು ವರ್ಷದ ಹಿಂದೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಹಿನ್ನೆಲೆಯಲ್ಲಿ ಇಂಜಿನಿಯರಿAಗ್ ಕ್ಷೇತ್ರದಲ್ಲಿಯೂ ಶೇ.20ರಷ್ಟು ಮಾತ್ರ ಕ್ಯಾಂಪಸ್ ಪ್ಲೇಸ್‌ಮೆಂಟ್ ಇತ್ತು. ಈ ಬಾರಿ ಕ್ಯಾಂಪಸ್ ಉದ್ಯೋಗ ಅವಕಾಶ ಶೇ.60ರಷ್ಟು ಹೆಚ್ಚಾಗುವ ನಿರೀಕ್ಷೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular