Sunday, December 22, 2024
Google search engine
Homeಮುಖಪುಟತಂತ್ರಜ್ಞಾನ ಬಳಕೆಯಿಂದ ಹಣಕಾಸಿನ ಸಾಕ್ಷರತೆ ಪ್ರಮಾಣ ಹೆಚ್ಚಳ: ಪ್ರೊ. ಟಿ.ಜಿ ಸೀತಾರಾಮ್

ತಂತ್ರಜ್ಞಾನ ಬಳಕೆಯಿಂದ ಹಣಕಾಸಿನ ಸಾಕ್ಷರತೆ ಪ್ರಮಾಣ ಹೆಚ್ಚಳ: ಪ್ರೊ. ಟಿ.ಜಿ ಸೀತಾರಾಮ್

ವಿಶ್ವದಲ್ಲಿ ಭಾರತವು ಅತೀ ದೊಡ್ಡ ಸ್ಮಾರ್ಟ್ಫೋನ್ ಉತ್ಪಾದನಾ ದೇಶವಾಗಿ ಹೊರಹೊಮ್ಮಿದೆ. ಶೇ.40ರಷ್ಟು ಯುಪಿಐ ವಹಿವಾಟು ಇದರಿಂದ ಹೆಚ್ಚಾಗಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಡಿಜಿಟಲ್ ವಹಿವಾಟು ನಡೆಸುತ್ತಿರುವುದರಿಂದ ಹಣಕಾಸಿನ ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್ ತಿಳಿಸಿದರು.

ತುಮಕೂರು ನಗರದ ಅಗಳಕೋಟೆಯಲ್ಲಿರುವ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಸಾಹೇ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದ ಭಾಷಣದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಸಹಾಯದಿಂದ ಪ್ರತಿಯೊಂದು ಮೂಲೆಯಲ್ಲಿಯೂ ಯುಪಿಐ ವಹಿವಾಟು ನಡೆಸಲು ಸಾಧ್ಯವಾಗುತ್ತಿದೆ. ಯುಪಿಐ ವಹಿವಾಟು, ಅತೀ ಹೆಚ್ಚು ಮೊಬೈಲ್, ಇಂಟರ್‌ನೆಟ್ ಬಳಕೆದಾರರು, ಹಣಕಾಸು ಸಾಕ್ಷರತೆ ಈ ಎಲ್ಲಾ ಕಾರಣಗಳಿಂದ 2035ರ ವೇಳೆಗೆ ಭಾರತ ಪ್ರಮುಖ ದೇಶವಾಗಲಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಕೌಶಲ್ಯ ಹೊಂದಿದವರಿಗೆ ಉದ್ಯೋಗಾವಕಾಶಗಳು ಹೆಚ್ಚಿದ್ದು, ಹೊಸ ಆವಿಷ್ಕಾರಗಳಿಗೆ ಇದು ಮುನ್ನುಡಿಯಾಗಲಿದೆ ಎಂದರು.

ಭಾರತದಲ್ಲಿ 4.33 ಕೋಟಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದು, ಅದರಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದೆ. ಇತ್ತೀಚೆಗೆ ಮನೆಯಲ್ಲಿಯೇ ಕುಳಿತು ಆರ್ಥಿಕ ವ್ಯವಹಾರಗಳನ್ನು ನಡೆಸುತ್ತಿರುವ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಭಾರತ ಮುಂದಿದೆ. ಇಸ್ರೋ ಸಂಸ್ಥೆಯ ಚಂದ್ರಯಾನ ಉಡಾವಣೆಯಲ್ಲಿ ಶೇ.30ರಷ್ಟಿದ್ದ ಮಹಿಳಾ ಇಂಜಿನಿಯರ್‌ಗಳ ಪಾತ್ರ ಪ್ರಮುಖವಾಗಿತ್ತು. ಮಹಿಳೆ ತನ್ನ ಸುತ್ತಮುತ್ತಲ ವಾತಾವರಣವನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾಳೆ ಎಂದು ಅವರು ಅಭಿಪ್ರಾಯಪಟ್ಟರು.

13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವೆ ಹಾಗೂ ನಿಕಟಪೂರ್ವ ರಾಜ್ಯಪಾಲೆ ಕರ್ನಾಟಕದ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಪಸರಿಸಲಿ, 100ರ ಗಡಿ ದಾಟಿ ಮುನ್ನಡೆಯಲಿ. ಇದೇ ಸಂದರ್ಭದಲ್ಲಿ ಅವರು ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ತಮ್ಮ ಸ್ವಾನುಭವದ ಮೂಲಕ ವೃತ್ತಿ ಬದುಕಿನಲ್ಲಿ ವಿದ್ಯಾರ್ಥಿಗಳು ಹೇಗೆ ಇರಬೇಕು ಎಂದು ಸಲಹೆ ನೀಡಿದರು.
ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿದರು. ಡಾಕ್ಟರೇಟ್ ಪದವಿ-24, ಇಂಜಿನಿಯರಿAಗ್-601 ವೈದ್ಯಕೀಯ-147,, ದಂತ ವೈದ್ಯಕೀಯ-49 ಸೇರಿದಂತೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ವಿತರಿಸಿದರು. ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ. ಲಿಂಗೇಗೌಡ ವಿಶ್ವವಿದ್ಯಾಲಯದ ವರದಿ ಮಂಡಿಸಿದರು.

ಈ ಸಂದರ್ಭದಲ್ಲಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ಕನ್ನಿಕಾ ಪರಮೇಶ್ವರ್, ಕುಲಸಚಿವ ಡಾ.ಎಂ.ಝೆಡ್ ಕುರಿಯನ್, ಕುಲಾಧಿಪತಿ ಸಲಹೆಗಾರ ಡಾ. ವಿವೇಕ್ ವೀರಯ್ಯ, ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ.ಗುರುಶಂಕರ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ಬೇಗೂರು ಸಿದ್ಧಾರ್ಥ ವೈದ್ಯಕೀಯ ವೈದ್ಯಕೀಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ದಿವಾಕರ್, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಪ್ರಭಾಕರ್ ಜಿ,ಎನ್, ಉಪ ಕುಲಸಚಿವ ಡಾ.ಸುದೀಪ್ ಕುಮಾರ್, ಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ, ಅವಲಾನ್ ವಿಶ್ವವಿದ್ಯಾಲಯದ ಕುಲಾಧಿಪತಿ ಶೌಕತ್ ಫತೇ, ಸಾಹೇ ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular