Wednesday, December 18, 2024
Google search engine
Homeಮುಖಪುಟಸ್ಥಳಕ್ಕೆ ಭೇಟಿ ನೀಡಿ ಪರಿಹಾರ ದೊರಕಿಸಿಕೊಡಿ-ಡಿಸಿ

ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ದೊರಕಿಸಿಕೊಡಿ-ಡಿಸಿ

ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಡಿಸಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಮಕೂರಿನ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಅಭಿವೃದ್ಧಿ, ನಿವೇಶನ ಹಂಚಿಕೆ, ಸಾಗುವಳಿ ಚೀಟಿ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕುಂದು ಕೊರತೆ ಸಭೆಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ತಾಲ್ಲೂಕು ಹಂತದಲ್ಲೇ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಹಲವಾರು ಗ್ರಾಮಗಳಲ್ಲಿನ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಡದಿರುವ ಬಗ್ಗೆ ಸಮುದಾಯದ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಸ್ಮಶಾನಕ್ಕಾಗಿ ಪ್ರತ್ಯೇಕ ಭೂಮಿಯನ್ನು ಮೀಸಲಿಟ್ಟಿದ್ದು, ಜಿ.ಪಿ.ಎಸ್ ಮೂಲಕ ಸರ್ವೇ ನಡೆಸಿ ಸ್ಮಶಾನ ಭೂಮಿಗೆ ಆವರಣ ಗೋಡೆ ನಿರ್ಮಾಣದ ಜೊತೆಗೆ ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಎಸ್‌ಪಿ ಕೆ.ವಿ. ಅಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಎಡಿಸಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಎಸಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ, ಗೌರವ್ ಕುಮಾರ್ ಶೆಟ್ಟಿ, ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ದಲಿತ ಮುಖಂಡರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular