Thursday, January 29, 2026
Google search engine
Homeಮುಖಪುಟಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಕರಲ್ಲಿ ಜಾಗೃತಿ ಮೂಡಿಸಿ :ವೆಂಕಟೇಶ್ ಕುಮಾರ್

ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಕರಲ್ಲಿ ಜಾಗೃತಿ ಮೂಡಿಸಿ :ವೆಂಕಟೇಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತದಾನ ಅತ್ಯಂತ ಪ್ರಮುಖವಾಗಿದ್ದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಜನತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್. ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರಿನ ನಿರೀಕ್ಷಣಾ ಮಂದಿರ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ಶಿಕ್ಷಣ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವಕರು ಚುನಾವಣೆ ಸಂದರ್ಭಗಳಲ್ಲಿ ತಮ್ಮ ಕ್ಷೇತ್ರಗಳಿಗೆ ತೆರಳಿ ಮತದಾನ ಮಾಡಲು ಆಸಕ್ತಿ ತೋರದೆ ಇರುವುದರಿಂದ ಅವರು ಇರುವ ಸ್ಥಳಗಳಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಯಡಿ ಸ್ವೀಕೃತವಾದ ಅರ್ಜಿಗಳು, ಮನೆ-ಮನೆ ಸಮೀಕ್ಷೆಯ ಪ್ರಗತಿ ಹಾಗೂ ಇ.ಪಿ.ರೇಷಿಯೋ, ಜೆಂಡರ್ ರೇಷಿಯೋ ಮುಂತಾದ ಮತದಾರರ ಪಟ್ಟಿಯ ಸಂಬAಧ ಸಾಧಿಸಿರುವ ಪ್ರಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರನ್ನು ನೋಂದಣಿ ಮಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಇ.ಪಿ. ರೇಷಿಯೋ ಮತ್ತು ಜೆಂಡರ್ ರೇಷಿಯೋ ಹೆಚ್ಚಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು ಎಂದರು.
ಪಟ್ಟಿಯಲ್ಲಿ ಮರಣ ಹೊಂದಿರುವ ಮತ್ತು ಖಾಯಂ ಸ್ಥಳಾಂತರಗೊAಡಿರುವ ಮತದಾರರನ್ನು ಗುರುತಿಸಿ, ನಿಯಮಾನುಸಾರ ಮತದಾರರ ಪಟ್ಟಿಯಿಂದ ಕೈಬಿಡಲು ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಡಿಸಿ ಶುಭಕಲ್ಯಾಣ್, ಜಿ.ಪಂ. ಸಿಇಒ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ, ಎಡಿಸಿ ಡಾ. ಎನ್.ತಿಪ್ಪೇಸ್ವಾಮಿ, ಚುನಾವಣಾ ತಹಶೀಲ್ದಾರ್ ರೇಷ್ಮಾ, ಎಸಿಗಳಾದ ಸಪ್ತಶ್ರೀ, ಗೌರವ್ ಕುಮಾರ್ ಶೆಟ್ಟಿ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಸೀಲ್ದಾರ್‌ಗಳು, ಮತ್ತಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular