Sunday, December 22, 2024
Google search engine
Homeಮುಖಪುಟಮಂಡ್ಯ- ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಅವಕಾಶ-ಪ್ರಗತಿಪರರ ಹೋರಾಟಕ್ಕೆ ಜಯ

ಮಂಡ್ಯ- ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಅವಕಾಶ-ಪ್ರಗತಿಪರರ ಹೋರಾಟಕ್ಕೆ ಜಯ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಗತಿಪರರು ಕೊನೆಗೂ ಬಾಡೂಟ ಹಾಕಿ ಊಟದಲ್ಲಿ ಸಮಾನತೆ ಮೆರೆದಿದ್ದಾರೆ.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ನಿಷೇಧವನ್ನು ಹೇರಿತ್ತು. ಈ ಹಿನ್ನೆಲೆಯಲ್ಲಿ ಪ್ರಗತಿಪರರು ಮತ್ತು ಕನ್ನಡ ಸಾಹಿತ್ಯ ಪರಿಷತ್ ನಡುವೆ ಪರಸ್ಪರ ವಾಗ್ವಾದ ನಡೆಯಿತು

ಪ್ರಗತಿಪರರು ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಅವಕಾಶ ನೀಡಬೇಕು. ಈ ಮೂಲಕ ಊಟದಲ್ಲಿ ಸಮಾನತೆ ಕಾಪಾಡಬೇಕು. ಮಾಂಸಾಹಾರ ನಮ್ಮ ಹಕ್ಕು ಎಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ನಡೆಸಿದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರು ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ಡಿ.22ರಂದು ಮಾಂಸಾಹಾರ ಅವಕಾಶ ಕಲ್ಪಿಸಿದೆ. ನೂರಾರು ಮಂದಿ ಮಾಂಸಾಹಾರ ಸೇವಿಸಿ, ಪೊಲೀಸರಿಗೆ ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular