Sunday, September 8, 2024
Google search engine
Homeಮುಖಪುಟ2ಎಗೆ ಪಂಚಮಸಾಲಿ ಜನಾಂಗ ಸೇರ್ಪಡೆ ಕೂಡದು

2ಎಗೆ ಪಂಚಮಸಾಲಿ ಜನಾಂಗ ಸೇರ್ಪಡೆ ಕೂಡದು

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ್ ನೇತೃತ್ವದಲ್ಲಿ ನಡೆಸಿರುವ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಿ ಒಳಮೀಸಲು ಕಲ್ಪಿಸುವ ಕುರಿತು ಸರ್ಕಾರ ಗಮನಹರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಡಾ.ಸಿ.ಎಸ್.ದ್ವಾರಕನಾಥ್ ಒತ್ತಾಯಿಸಿದರು.

ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಬಿಡುಗಡೆ ಮಾಡುವಂತೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದೆವು. ಯಾರಿಂದಲೂ ಈ ಬಗ್ಗೆ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಹೇಳಿದರು.

ಜನರ ತೆರಿಗೆಯ ಹಣದಿಂದ ಈ ಸಮೀಕ್ಷೆ ಮಾಡಿಸಿದೆ. ಹಿಂದುಳಿದ ವರ್ಗಗಳ ಆಯೋಗದ ಬಳಿ ವರದಿ ಇದೆ. ಹಿಂದುಳಿದ ವರ್ಗಗಳಲ್ಲಿ ಬರುವ ಜಾತಿಗಳ ಸಮಗ್ರ ಪರಿಸ್ಥಿತಿಯನ್ನು ವರದಿಯಲ್ಲಿ ದಾಖಲಿಸಲಾಗಿದೆ. ಮೀಸಲಾತಿಯನ್ನು ಕೆಲವು ಜಾತಿಗಳು ಅತಿ ಹೆಚ್ಚು ಪಡೆದುಕೊಂಡಿವೆ. ಹಾಗಾಗಿ ಇಲ್ಲೂ ಕೂಡ ಒಳಮೀಸಲು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಪ್ರಬಲ ಸಮುದಾಯಗಳಲ್ಲೊಂದಾದ ಪಂಚಮಸಾಲಿ ಜನಾಂಗವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಬಾರದೆಂದು ಜಯಪ್ರಕಾಶ ಹೆಗಡೆ ಆಯೋಗದ ಮುಂದೆ ಮನವಿ ಮಾಡಿದ್ದೆವು. ಅದು ದೊಡ್ಡ ಸಮುದಾಯ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪಂಚಮಸಾಲಿ ಸಮುದಾಯ ಮುಂದಿದೆ. ಹಾಗಾಗಿ ಅದನ್ನು 2ಎಗೆ ಸೇರ್ಪಡೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ಅತಿ ಹಿಂದುಳಿದ ವರ್ಗಗಳ ಸಮಾರಂಭದಲ್ಲಿ ಮಾತನಾಡಿದ ಅವರು ‘ಅಂಬೇಡ್ಕರ್ ಒಬಿಸಿ ವರ್ಗದಲ್ಲಿ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳು ಬರುತ್ತವೆ ಎಂದು ಹೇಳಿದ್ದರು. ಮೀಸಲಾತಿ ಪಡೆಯುತ್ತಿರುವ ಹಿಂದುಳಿದ ವರ್ಗಗಳು ಅಂಬೇಡ್ಕರ್ ಅವರನ್ನ ಸ್ಮರಿಸದೆ ಆತ್ಮವಂಚನೆ ಮಾಡಿಕೊಳ್ಳುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular