Sunday, February 16, 2025
Google search engine
Homeಮುಖಪುಟವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು

ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು

ವಿದ್ಯಾರ್ಥಿಗಳು ಕೌಶಲ್ಯವನ್ನು ಹೆಚ್ಚಿಸಿಕೊಂಡು ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿ ಕೆ.ಬಿ.ಲಿಂಗೇಗೌಡ ಕರೆ ನೀಡಿದರು.

ತುಮಕೂರು ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪಿಜಿ ಸೆಮಿನಾರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಪ್ರಥಮ ಬ್ಯಾಚ್‌ನ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಕೌಶಲ್ಯವನ್ನು ಕಲಿಯುವ ಅನಿವಾರ್ಯತೆ ಇದೆ. ಕೌಶಲ್ಯವನ್ನು ಬೆಳಸಿಕೊಂಡು ಧೈರ್ಯದಿಂದ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ. ಎಂ.ಝಡ್. ಕುರಿಯನ್ ಮಾತನಾಡಿ, ನಿಮ್ಮ ಯಶಸ್ಸಿಗೆ ನೀವೇ ಕಾರಣ. ಹಾಗಾಗಿ ಯಶಸ್ಸಿನ ಕಡೆ ಮುನ್ನುಗ್ಗಿ. ಬಂದ ಅವಕಾಶವನ್ನು ಬಿಟ್ಟು ಮತ್ತೊಂದು ಅವಕಾಶಕ್ಕೆ ಕಾಯಬೇಡಿ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉದ್ಯಮವನ್ನು ಸೃಷ್ಟಿಸುವ ಕಡೆ ಗಮನಹರಿಸಿ ಎಂದು ಸಲಹೆ ನೀಡಿದರು.

ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲÀ ಡಾ.ಎಂ.ಎಸ್.ರವಿಪ್ರಕಾಶ್ ಮಾತನಾಡಿ, ಪ್ರಸಕ್ತ ಸಂದರ್ಭದಲ್ಲಿ ಬೇಡಿಕೆ ಇರುವ ಎಂಬಿಎ ಕೋರ್ಸ್ಗೆ ಬೇಕಾದ ಎಲ್ಲಾ ಸೌಲಭ್ಯವನ್ನು ನೀಡಲಾಗಿದೆ. ಇದನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾನಿಲಯ ಪರಿಕ್ಷಾಂಗ ಕುಲಸಚಿವÀ ಡಾ. ಗುರುಶಂಕರ್, ಉದ್ಯೋಗ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥ ಡಾ. ಅಶೋಕ್ ಮೆಹ್ತ, ಅಕಾಡಮಿ ಡೀನ್ ಡಾ. ರೇಣುಕಲತಾ, ಎಂಬಿಎ ವಿಭಾಗದ ಮುಖ್ಯಸ್ಥ ಡಾ.ರೂಪ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular