Thursday, January 29, 2026
Google search engine
Homeಜಿಲ್ಲೆಆಟನೂ ಮುಖ್ಯ ಎಂದ ಸಾಹೇ ಉಪಕುಲಪತಿ ಲಿಂಗೇಗೌಡ

ಆಟನೂ ಮುಖ್ಯ ಎಂದ ಸಾಹೇ ಉಪಕುಲಪತಿ ಲಿಂಗೇಗೌಡ

ವಿದ್ಯಾರ್ಥಿಗಳ ಜೀವನದಲ್ಲಿ ಪಾಠದ ಜೊತೆಗೆ ಆಟನೂ ಸಹ ಉತ್ತಮ ಪಾತ್ರವನ್ನು ವಹಿಸುತ್ತದೆ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಬಿ ಲಿಂಗೇಗೌಡ ತಿಳಿಸಿದರು.
ತುಮಕುರು ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಸಾಹೇ ವಿಶ್ವವಿದ್ಯಾಲಯ ಹಾಗೂ ಎಸ್‌ಎಸ್‌ಐಟಿ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುವಂತಹ ಕ್ರೀಡಾಕೂಟದಂತಹ ಹಲವು ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ತಮ್ಮನ್ನು ತಾವು ತೆರೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಾಹೇ ವಿವಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಫ್ಲೋರಿಡಾ ಯೂನಿವರ್ಸಿಟಿಯ ಪ್ರೊ. ಎಸ್. ಎಸ್. ಅಯ್ಯಂಗಾರ್ ಮಾತನಾಡಿ, ಕ್ರೀಡೆ ಎನ್ನುವುದು ಜೀವನದಲ್ಲಿ ಪ್ರಮುಖವಾದ ಒಂದು ಅಂಶ. ಕ್ರೀಡೆ ಮನುಷ್ಯನಿಗೆ ಉತ್ತಮ ಯೋಚನೆ, ಕ್ರಿಯಾಶೀಲತೆ, ಧನಾತ್ಮಕ ಚಿಂತನೆಯನ್ನು ನೀಡುತ್ತದೆ. ಅಲ್ಲದೆ ಮನುಷ್ಯ ದೈಹಿಕವಾಗಿ, ಆರೋಗ್ಯವಾಗಿ ಉತ್ತಮ ಜೀವನ ನಡೆಸಲು ಸಹಕಾರಿ ಎಂದು ಹೇಳಿದರು.
ಸಾಹೇ ವಿವಿಯ ಕುಲಸಚಿವ ಡಾ.ಎಂ.ಝಡ್. ಕುರಿಯನ್ ಮಾತನಾಡಿ, ಕ್ರೀಡಾ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಹೆಚ್ಚಾಗುತ್ತದೆ, ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ನಾಯಕತ್ವದ ಗುಣ ಹೆಚ್ಚಾಗುತ್ತದೆ ಹಾಗೂ ತಮ್ಮ ತಂಡಕ್ಕಾಗಿ ಹೋರಾಡುವ ಮನಸ್ಥಿತಿಯನ್ನ ಕ್ರೀಡಾಪಟುಗಳು ಬೆಳೆಸಿಕೊಳ್ಳುತ್ತಾರೆ ಎಂದು ತಿಳಿಸಿದರು.

ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್ ರವಿಪ್ರಕಾಶ ಮಾತನಾಡಿ, ವಾಲಿಬಾಲ್ ಪಂದ್ಯಾವಳಿಯಲ್ಲಿ ಹಲವು ಕಾಲೇಜಿನ ತಂಡಗಳು ಭಾಗವಹಿಸಿವೆ. ಆಟದಲ್ಲಿ ಸೋಲು ಗೆಲುವು ಅನ್ನುವುದಕ್ಕಿಂತ ಸ್ಪರ್ಧೆಯಲ್ಲಿ ಭಾಗವಹಿಸುವುದು ಪ್ರಮುಖವಾಗಿದೆ. ಹಾಗಾಗಿ ಎಲ್ಲರೂ ಉತ್ತಮವಾಗಿ ಪಂದ್ಯದಲ್ಲಿ ಪಾಲ್ಗೊಳ್ಳಿರಿ ಎಂದು ಹೇಳಿದರು.

ವಾಲೀಬಾಲ್ ಪಂದ್ಯದಲ್ಲಿ ಹಾಸನ, ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಕಾಲೇಜಿನ ತಂಡಗಳ 16 ಪುರುಷರ ತಂಡ ಹಾಗೂ 8 ಮಹಿಳಾ ತಂಡಗಳು ಭಾಗವಹಿಸಿದ್ದು ಈ ಪೈಕಿ ಒಟ್ಟು 12 ಪಂದ್ಯಗಳು ನಡೆದಿದೆ. ನಾಲ್ಕು ತಂಡಗಳಾದ ಎಸ್‌ಎಸ್‌ಐಟಿ, ಎಸ್‌ಐಟಿ, ಎನ್‌ಎಂಎಐಟಿ ಮತ್ತು ಬಿಜಿಎಸ್‌ಸಿಇ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಇಂದು ಮಹಿಳಾ ವಿಭಾಗಕ್ಕೆ ಸೆಣಸಾಟ ನಡೆಯಲಿದೆ. ಈ ವೇಳೆ ರೆಫರಿಗಳಾಗಿ ಸುರೇಶ್, ಗಿರೀಶ್, ಚನ್ನೆಗೌಡ, ಪ್ರದೀಪ್, ನಿಖಿಲ್ ಗೌಡ ಹಾಗೂ ನಂದೀಶ್ ಪಾಲ್ಗೊಂಡು ಪಂದ್ಯಗಳನ್ನು ನಡೆಸಿಕೊಟ್ಟರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular