Friday, January 30, 2026
Google search engine
Homeಮುಖಪುಟಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧ-ಸಿದ್ದರಾಮಯ್ಯ

ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧ-ಸಿದ್ದರಾಮಯ್ಯ

ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ದಾವಣಗೆರೆಯ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿ ಸಂಬಂಧ ಸಮಿತಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಟೀಕಿಸಿದರು.

ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ತಾಕೀತು ಮಾಡಿದರು.

ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದರು.

ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದ ಅವರು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ.

ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular