Thursday, January 29, 2026
Google search engine
Homeಜಿಲ್ಲೆತುಮುಲ್ ಚುನಾವಣೆ ಫಲಿತಾಂಶ ಪ್ರಕಟ-ಕಾಂಗ್ರೆಸ್ ಮೇಲುಗೈ

ತುಮುಲ್ ಚುನಾವಣೆ ಫಲಿತಾಂಶ ಪ್ರಕಟ-ಕಾಂಗ್ರೆಸ್ ಮೇಲುಗೈ

ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ.
ತುಮಕೂರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ ಸಮಕ್ಷದಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ 10 ಗಂಟೆ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಯಿತು.
ತುಮಕೂರು ಗ್ರಾಮಾಂತರ, ತಿಪಟೂರು, ಮಧುಗಿರಿ, ಪಾವಗಡ ಹಾಗೂ ಗುಬ್ಬಿ ಸೇರಿ 5 ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಕುಣಿಗಲ್, ಸಿರಾ, ಕೊರಟಗೆರೆ ತಾಲ್ಲೂಕಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಿಂದ ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular