16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1ರಿಂದ 8ರ ವರೆಗೆ ನಡೆಯಲಿದ್ದು ಚಲನಚಿತ್ರೋತ್ಸವದ ರಾಯಭಾರಿಯಾಗಿ ಖ್ಯಾತ ನಟ ಕಿಶೋರ್ ಕುಮಾರ್ ನೇಮಕಗೊಂಡಿದ್ದಾರೆ.
2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದ್ದು 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.
ಸಿಎಂ ಅಭಿನಂದನೆ
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ಹೇಳಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.