ಪತಿಯ ಅನುಮಾನದಿಂದ ಬೇಸತ್ತ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು 30 ವರ್ಷದ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಗಂಡ ನಿತ್ಯವೂ ಸಂಶಯದಿಂದ ಪತ್ನಿಯನ್ನು ನೋಡುತ್ತಿದ್ದ ಎಂಬುದು ಡೆತ್ ನೋಟ್ ನಲ್ಲಿ ಬರೆದಿಟ್ಟು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಕ್ಷ್ಮೀ ಮತ್ತು ಆಕೆಯ ಪತಿ ರಾಜು ನಡುವೆ ಕಳೆದ ರಾತ್ರಿ ಜಗಳ ನಡೆದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನೊಂದ ಮಹಿಳೆ ನೇಣು ಬಿಗಿದುಕೊಮಡು ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಡೆತ್ ನೋಟ್ ಅನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆಕೆಯ ಪತಿ ರಾಜು ಮತ್ತು ಆಕೆಯ ಅತ್ತೆ ಮತ್ತು ಮಾವನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.