Monday, March 3, 2025
Google search engine
Homeಮುಖಪುಟಮತದಾರರು ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕು - ನ್ಯಾ. ನೂರುನ್ನೀಸ ಕರೆ

ಮತದಾರರು ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕು – ನ್ಯಾ. ನೂರುನ್ನೀಸ ಕರೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರರೂ ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಕರೆ ನೀಡಿದರು.

ತುಮಕೂರಿನ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ದೇಶದ ಸುವ್ಯವಸ್ಥೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹೊಂದಬೇಕು. ಚುನಾವಣೆಯಲ್ಲಿ ನ್ಯಾಯಸಮ್ಮತವಾಗಿ, ಪ್ರಾಮಾಣಿಕವಾಗಿ ಮತ ಚಲಾಯಿಸುವ ಮೂಲಕ ದೇಶದ ಭದ್ರತೆಗೆ ಕಾರಣಕರ್ತರಾಗಬೇಕು ಎಂದು ಕಿವಿಮಾತು ಹೇಳಿದರು.

ಡಿಸಿ ಶುಭ ಕಲ್ಯಾಣ್ ಮಾತನಾಡಿ, ಯಾವುದೇ ರಾಷ್ಟ್ರವನ್ನುಮುನ್ನಡೆಸಲು ಪ್ರತಿಯೊಬ್ಬ ಪ್ರಜೆಯೂ ಮತದಾನದ ಹಕ್ಕು ಹೊಂದುವುದು ಅತ್ಯಾವಶ್ಯಕ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ. ರಾಷ್ಟ್ರ ವನ್ನು ಮುನ್ನಡೆಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಈ ಮತದಾನ ನೀಡುತ್ತದೆ. ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾರರು ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆರಿಸಿ ದೇಶದ ಉಜ್ವಲ ಭವಿಷ್ಯಕ್ಕೆ ಕಾರಣರಾಗಬೇಕೆಂದು ಕರೆ ನೀಡಿದರು.

ಜಿ.ಪಂ. ಸಿಇಒ ಜಿ. ಪ್ರಭು ಮಾತನಾಡಿ, ಸಾರ್ವತ್ರಿಕ ಚುನಾವಣಾ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಉತ್ತೇಜಿಸುವ ಸಲುವಾಗಿ ಪ್ರತೀ ವರ್ಷ ಜನವರಿ ೨೫ರಂದು ರಾಷ್ಟಿçÃಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲ ಮತದಾನದ ಮೌಲ್ಯವನ್ನು ಅರಿಯಬೇಕು. ಒಂದೊAದು ಮತವೂ ದೇಶದ ಭವಿಷ್ಯದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸಿ ಗೌರವ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಂಗಸ್ವಾಮಿ, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮತ್ತಿತರೆ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular