ಡಿಸೇಲ್, ಪರಿಕರಗಳ ಬೆಲೆ ಹೆಚ್ಚಳವಾಗಿದ್ದರೂ ರಾಜಕೀಯ ಕಾರಣಗಳಿಗೊಸ್ಕರ ಬಸ್ ದರ ಹೆಚ್ಚಳ ಮಾಡಲು ಸಾಧ್ಯವಾಗಿಲ್ಲ. ಇದರ ಪರಿಣಾಮ ಸಂಪನ್ಮೂಲದ ಕೊರತೆಯಿಂದ ನೌಕರರಿಗೆ ಕಾಲ ಕಾಲಕ್ಕೆ ನೀಡಬೇಕಾದ ವೇತನ ಹೆಚ್ಚಳ, ತುಟ್ಟಿ ಭತ್ಯ ಇನ್ನಿತರ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕೆಎಸ್ಆರ್ ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ತುಮಕೂರು ನಗರದ ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಕೆ.ಎಸ್.ಆರ್.ಟಿ.ಸಿ. ಕನ್ನಡ ಕ್ರಿಯಾಸಮಿತಿ ಆಯೋಜಿಸಿದ್ದ ಕರುನಾಡು ಸಾರಿಗೆ ಸಂಭ್ರಮ-2025ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಗ್ಗೆ ಹಲವು ಬಾರಿ ಸಾರಿಗೆ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಮುಂದೆ ಒಳ್ಳೆಯದಾಗಬಹುದು ಎಂಬ ನಿರೀಕ್ಷೆಯಿದೆ ಎಂದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಅತ್ಯಂತ ಕಷ್ಟ ಜೀವಿಗಳು.ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಸವಲತ್ತುಗಳನ್ನು ನೀಡಲು ಅರ್ಥಿಕ ಮುಗ್ಗಟ್ಟಿನಿಂದ ಸಾಧ್ಯವಾಗುತ್ತಿಲ್ಲ.ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದರೂ ಸಹ ರಾಜಕೀಯ ಪ್ರವೇಶದಿಂದ ನೌಕರರ ಹಿತ ಕಾಪಾಡುವುದು ಕಷ್ಟ ಸಾಧ್ಯವಾಗಿದೆ ಎಂದು ತಿಳಿಸಿದರು.
ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಕನ್ನಡ ಭಾಷೆ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ ನೌಕರರ ಅದರಲ್ಲಿಯೂ ಡ್ರೈವರ್, ಕಂಡ್ಟೆರ್ಗಳ ಪಾತ್ರ ಮಹತ್ವದಿದೆ. ಕೆ.ಎಸ್.ಅರ್.ಟಿ.ಸಿ ನೌಕರರಲ್ಲಿಯೂ ಪ್ರತಿಭೆಗೆ ಕೊರತೆಯಿಲ್ಲ. ತಮಿಳಿನ ಸೂಪರ್ ಸ್ಟಾರ್ ರಜಿನಿಕಾಂತ್, ಕನ್ನಡ ಯಶ್ ಇವೆರೆಲ್ಲರೂ ಸಾರಿಗೆ ನೌಕರರ ಕುಟುಂಬಕ್ಕೆ ಸೇರಿದವರು ಎಂದು ಹೇಳಿದರು.
ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಕೆ.ಎಸ್.ಆರ್.ಟಿ.ನಿ ನೌಕರರಲ್ಲಿ ಇರುವ ಪ್ರತಿಭೆ ಹೊರ ಹೊಮ್ಮಿಸಲು ಇರುವ ವೇದಿಕೆಯಾಗಿದೆ. ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ.ಸೇರಿದಂತೆ ಎಲ್ಲಾ ಸಾರಿಗೆ ಸಂಸ್ಥೆಗಳಲ್ಲಿಯೂ ಕನ್ನಡ ರಾಜೋತ್ಸವವನ್ನು ಬಹಳ ವಿಜೃಂಭಣೆಯಿAದ ಆಚರಿಸಲಾಗುತ್ತದೆ.ಮಕ್ಕಳ ಪ್ರತಿಭೆಗಳಿಗೆ ಅವಕಾಶವಿದೆ.ಮನೆಯಲ್ಲಿ ಮಾತೃಭಾಷೆ ಯಾವುದೇ ಇರಲಿ, ಮಕ್ಕಳಿಗೆ ಕನ್ನಡ ಕಲಿಸಿ ಎಂದು ಸಲಹೆ ನೀಡಿದರು.
ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವಿ.ಡಿ.ಹನುಮಂತರಾಯಪ್ಪ, ಸಾಹಿತಿ ಬಾಪೂಜ, ನಿವೃತ್ತ ತಾಂತ್ರಿಕ ಅಭಿಯಂತರ ಗಜೇಂದ್ರಕುಮಾರ್, ಕುವೆಂಪು ಪ್ರಕಾಶ್, ಪ್ರಕಾಶ್ ನಾಡಿಗ್, ವಿ.ಡಿ.ಹನುಮಂತರಾಯಪ್ಪ, ಜಿ.ನಾಗೇಂದ್ರ, ಹೆಚ್.ಎಸ್.ರಾಜಶೇಖರ್, ಕೆ.ಬಸವರಾಜು, ಆಸೀಫವುಲ್ಲಾ ಷರಿಫ್, ತೇಜಸ್.ಜಿ.ಕೆ, ಹಂಸವೀಣಾ, ಶ್ರೀನಿವಾಸ್, ಹನುಮಂತರಾಯಪ್ಪ ಇದ್ದರು.