Thursday, January 29, 2026
Google search engine
Homeಮುಖಪುಟಕೊವಿಡ್ ಲಸಿಕೆಯ ಅಡ್ಡಪರಿಣಾಮ:ತಜ್ಞರ ಸಮಿತಿ ರಚನೆಗೆ ನಿರ್ಧಾರ

ಕೊವಿಡ್ ಲಸಿಕೆಯ ಅಡ್ಡಪರಿಣಾಮ:ತಜ್ಞರ ಸಮಿತಿ ರಚನೆಗೆ ನಿರ್ಧಾರ

ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು ಎಂದು ತಿಳಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು ಎಂದಿದ್ದಾರೆ.

ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular