ಐದು ವರ್ಷ ಪೂರ್ಣಾವಧಿಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಎರಡೂವರೆ ವರ್ಷಕ್ಕೆ ನಾಯಕ ಅಂಥ ಆಯ್ಕೆ ಮಾಡಿಲ್ಲ. ಪೂರ್ಣಾವಧಿಗೂ ಅವರೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಭರ್ತಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ 7 ವರ್ಷದ ದಾಖಲೆಯನ್ನು ಮುರಿಯುತ್ತಾರೆ. ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಅವಧಿಗೂ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.


