ಪತಿಯ ಅನೈತಿಕ ಸಂಬಂಧದಿಂದ ಮನ ನೊಂದ ಪತ್ನಿ ತನ್ನ ಮಗಳನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯ ಬಾಗಲಕುಂಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬ್ಯಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರುತಿ ಎಂದು ಗುರುತಿಸಲಾಗಿದೆ.
ಶ್ರುತಿ ಶಿರಾ ತಾಲೂಕಿನನ ಗುಳಿಗೇನಹಳ್ಳಿಯವರು ಎಂದು ತಿಳಿದುಬಂದಿದೆ. ಗಂಡನ ಅಕ್ರಮ ಸಂಬಂಧದಿಂದ ರೋಸಿ ಹೋಗಿದ್ದ ಶ್ರುತಿ ತನ್ನ ನಾಲ್ಕು ವರ್ಷದ ರೋಹಿಣಿ ಎಂಬ ಮಗಳನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಶ್ರುತಿ ಅವರ ತಂದೆ ಬೆಂಗಳೂರಿನ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ತನ್ನ ಅಳಿಯನ ಅಕ್ರಮ ಸಂಬಂಧವೇ ಮಗಳ ಆತ್ಮಹತ್ಯೆಗೆ ಕಾರಣ ಎಂದು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.


