ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರತಿಷ್ಠಾನ, ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜು, ತುಮಕೂರು ವಿಶ್ವವಿದ್ಯಾನಿಲಯ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಒಕ್ಕೂಟದ ವತಿಯಿಂದ ಫೆ.21ರಂದು ಮಧ್ಯಾಹ್ನ 12 ಗಂಟೆಗೆ ವಿವಿಯ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹಿರಿಯ ಪತ್ರಕರ್ತ ಹಾಗೂ ಕಥೆಗಾರ ರಘುನಾಥ ಚ.ಹ. ಅವರಿಗೆ ಪ್ರಬಂಧ ಕ್ಷೇತ್ರದಲ್ಲಿ ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರತಿಷ್ಠಾನದ ಪ್ರಶಸ್ತಿಯನ್ನು ಹಾಗೂ ಸಾಹಿತ್ಯ ಸೇವೆಯಲ್ಲಿ ತೊಡಗಿದ ಲೇಖಕಿ ರೂಪ ಹಾಸನ ಅವರಿಗೆ
ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರತಿಷ್ಠಾನದ ಕಾವ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಸಿದ್ದ ವಿಮರ್ಶಕ ಎಚ್.ಎಸ್. ರಾಘವೇಂದ್ರ ರಾವ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಡಾ.ನಾಗಭೂಷಣ ಬಗ್ಗನಡು ತಿಳಿಸಿದ್ದಾರೆ.
ಬಹುಮುಖಿ ಸಂಸ್ಕೃತಿ ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನಾಡುವರು. ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸುವರು. ಪ್ರತಿಷ್ಠಾನದ ಅಧ್ಯಕ್ಷ ಎಂ.ಬಸವಯ್ಯ ಭಾಗವಹಿಸುವರು.
ಪತ್ರಿಕೋದ್ಯಮಿ ಎಸ್.ನಾಗಣ್ಣ, ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಅವರ ಪತ್ನಿ ಶಾಂತಾ ಸಣ್ಣಗುಡ್ಡಯ್ಯ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಕಾಶ ಎಂ.ಶೇಠ, ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ.ಜಿ.ಆರ್.ರೇಣುಕಪ್ರಸಾದ್ ಪಾಲ್ಗೊಳ್ಳುವರು.


