ಹೈಕಮಾಂಡ್ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿರುವುದು ಮನೆಯಲ್ಲಿ ಕುಳಿತುಕೊಳ್ಳಲು ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತನ್ನ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ನನಗೆ ಮಂತ್ರಿ ಸ್ಥಾನ ಕೊಟ್ಟಿದೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ಇದು ಸುಮ್ಮನೆ ಕೂರಲು ಅಲ್ಲ ಎಂದು ಹೇಳಿದ್ದಾರೆ.
ನಾನು ಅಧ್ಯಕ್ಷನಾಗಿರುವುದರಿಂದ ಎಲ್ಲಾ ರಾಜ್ಯಗಳಿಗೂ ನನ್ನನ್ನು ಕರೆಯುತ್ತಾರೆ. ತೆಲಂಗಾಣ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಆಂಧ್ರಪ್ರದೇಶ, ದೆಹಲಿ ಹೀಗೆ ಎಲ್ಲರೂ ನನ್ನನ್ನು ಕರೆಯುತ್ತಾರೆ. ನನ್ನಲ್ಲಿ ನಾಯಕತ್ವದ ಗುಣ ಇದೆ ಎಂದು ಕರೆಯುತ್ತಾರೆ ಎಂದು ತನ್ನ ಸಾಮರ್ಥ್ಯ ಏನು ಎಂಬುದನ್ನು ಮಾರ್ಮಿಕವಾಗಿ ತಿಳಿಸಿದರು.
ಮುಂದಿನ ಚುನಾವಣೆಯು ನನ್ನ ನಾಯಕತ್ವದಲ್ಲೇ ನಡೆಯಲಿದೆ ಎಂದ ಅವರು, ನಾನು ಹಿಂದೂವಾಗಿ ಹುಟ್ಟಿದ್ದೇನೆ. ಹಿಂದೂವಾಗಿಯೇ ಸಾಯುತ್ತೇನೆ ಎಂದು ಹೇಳಿದ್ದಾರೆ.


