Thursday, January 29, 2026
Google search engine
Homeಜಿಲ್ಲೆಕುಡಿಯುವ ನೀರಿನ ಸಮಸ್ಯೆ: DCಗೆ ಮೋರಗಾನಹಳ್ಳಿ ಗ್ರಾಮಸ್ಥರ ಅಳಲು

ಕುಡಿಯುವ ನೀರಿನ ಸಮಸ್ಯೆ: DCಗೆ ಮೋರಗಾನಹಳ್ಳಿ ಗ್ರಾಮಸ್ಥರ ಅಳಲು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಡಿಸಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು.

ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಅಹವಾಲು ನೀಡಿದ್ದರು. ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಡಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲಿಗೆ ಸ್ಪಂದಿಸಿದ ಡಿಸಿ ಕುಡಿಯುವ ನೀರಿನ ಸಮಸ್ಯೆಗೆ ತುರ್ತಾಗಿ ಪರಿಹಾರ ಒದಗಿಸಬೇಕೆಂದು ತಹಶೀಲ್ದಾರ್ ಮಂಜುನಾಥ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಾಂತರಾಜು ಅವರಿಗೆ ಸೂಚನೆ ನೀಡಿದರು.

ಬಳಿಕ ಜಾನುವಾರುಗಳ ಮೇವಿನ ಬಗ್ಗೆ ಆಲಿಸಿದ ಅವರು ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು. ಜನರು ವಾಸಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿಬರಲು ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದಾಗ ಡಿಸಿ ಸ್ಥಳದಲ್ಲಿಯೇ ದೂರವಾಣಿ ಮೂಲಕ ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಿ ಬಸ್ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆ 7304975519, 0816-2213400ಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular