Thursday, March 13, 2025
Google search engine
Homeಮುಖಪುಟಕರ್ತವ್ಯ ನಿರ್ವಹಣೆಯಲ್ಲಿ ಗೃಹ ಸಚಿವರು ವಿಫಲ-ರಾಜಿನಾಮೆಗೆ ಜ್ಞಾನ ಸಿಂಧೂಸ್ವಾಮಿ ಆಗ್ರಹ

ಕರ್ತವ್ಯ ನಿರ್ವಹಣೆಯಲ್ಲಿ ಗೃಹ ಸಚಿವರು ವಿಫಲ-ರಾಜಿನಾಮೆಗೆ ಜ್ಞಾನ ಸಿಂಧೂಸ್ವಾಮಿ ಆಗ್ರಹ

ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪೊಲೀಸ್ ವ್ಯವಸ್ಥೆ ಕೈಜೋಡಿಸಿರುವುದು ಈಗಾಗಲೇ ಕಂಡು ಬಂದಿರುತ್ತದೆ. ಇದು ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿರುವುದನ್ನು ತೋರಿಸುತ್ತದೆ ಮತ್ತು ಈ ಅವ್ಯವಸ್ಥೆಯನ್ನು, ಪೊಲೀಸ್ ಅಕ್ರಮಗಳನ್ನು ನಿಯಂತ್ರಿಸುವಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಂಪೂರ್ಣವಾಗಿ ವಿಫಲರಾಗಿದ್ದು ಕೂಡಲೇ ರಾಜಿನಾಮೆ ನೀಡಬೇಕು ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನ ಸಿಂಧೂಸ್ವಾಮಿ ಆಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವಿಲ್ಲದಿರುವುದರಿಂದಲೇ, ಇಲಾಖೆಯಲ್ಲಿನ ಹಲವು ಅಧಿಕಾರಿಗಳು ಯಾವುದೇ ಭಯವಿಲ್ಲದೆ ಕಳ್ಳ ಸಾಗಣೆಯಂತಹ ಅಕ್ರಮಗಳಿಗೆ ಬೆನ್ನೆಲುಬಾಗಿ ನಿಂತಿರುವುದು. ಹಲವಾರು ಪ್ರಕರಣಗಳಲ್ಲಿ ಅವರು ನೇರವಾಗಿ ಭಾಗಿಯಾಗಿರುವುದು ಸ್ಪಷ್ಟವಾಗಿ ತಿಳಿಯುತ್ತದೆ. ಇದಕ್ಕೆ ಮತ್ತೊಂದು ಉದಾಹರಣೆ ಎಂದರೆ, ಇತ್ತೀಚಿನ ದಿನಗಳಲ್ಲಿ ಲೋಕಾಯುಕ್ತ ಪೊಲೀಸ್ ದಾಳಿಗಳಲ್ಲಿ ಅನೇಕ ಪೊಲೀಸ್ ಅಧಿಕಾರಿಗಳು ಸಿಕ್ಕಿ ಬೀಳುತ್ತಿರುವುದು. ಆಡಳಿತದಲ್ಲಿ ದಕ್ಷತೆಯನ್ನು ತರುವಲ್ಲಿ ಗೃಹ ಸಚಿವರಿಂದ ಯಾವುದೇ ಪ್ರಯತ್ನ ಆಗಿರುವುದಿಲ್ಲ. ಡಾ. ಜಿ. ಪರಮೇಶ್ ಅವರು ರಾಜ್ಯ ಕಂಡ ದುರ್ಬಲ ಗೃಹ ಸಚಿವರಲ್ಲಿ ಒಬ್ಬರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳು ವ್ಯವಹಾರಿಕ ಸಂಬಂಧ ಹೊಂದಿದ್ದಾರೆ ಎಂಬುದು ತಿಳಿದಿರುವ ವಿಚಾರ, ಹಾಗೆಯೆ ಅನೇಕ ಕ್ರಿಮಿನಲ್‌ಗಳ ಜೊತೆ ಅಧಿಕಾರಿಗಳಿಗೆ ನಿಖಟ ಸಂಪರ್ಕ ಇರುವುದು ಇದೆ. ಇವೆಲ್ಲವನ್ನು ತಡೆಯುವಲ್ಲಿ ಗೃಹ ಸಚಿವರಾಗಿ ಡಾ. ಜಿ. ಪರಮೇಶ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಆದ್ದರಿಂದ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಆಗ್ರಹಿಸಿದ್ದಾರೆ.

ಈ ಪ್ರಕರಣದಲ್ಲಿ, ಇನ್ನೂ ಇಬ್ಬರು ಸಚಿವರ ಪಾತ್ರವಿದೆ ಎಂದು ತನಿಖಾ ಸಮಯದಲ್ಲಿ ತಿಳಿದುಬಂದಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆ ಸಚಿವರುಗಳು ಯಾರು ಎಂಬ ಮಾಹಿತಿ ಮುಖ್ಯಮಂತ್ರಿಯವರಿಗೆ ಇದ್ದೇ ಇರುತ್ತದೆ. ತಕ್ಷಣವೇ ಆ ಇಬ್ಬರು ಮಂತ್ರಿಗಳಿAದ ರಾಜಿನಾಮೆ ಪಡೆಯಬೇಕು ಅಥವಾ ಅವರುಗಳನ್ನು ಸಚಿವ ಸಂಪುಟದಿAದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular