ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟ, ತುಮಕೂರು ವಿಶ್ವವಿದ್ಯಾಲಯ, ದರೈಸ್ತ್ರೀ ಕಲ್ಚರಲ್ ಟ್ರಸ್ಟ್ ಹಾಗೂ ಸಮತಾ ಪ್ರಕಾಶನದ ವತಿಯಿಂದ ತುಮಕೂರಿನ ವಿವಿ ವಿಶ್ವೇಶ್ವರ ಸಭಾಂಗಣದಲ್ಲಿ ಮಾರ್ಚ್ 16ರಂದು ಬೆಳಗ್ಗೆ 10.30 ಗಂಟೆಗೆ ಡಾ.ಶಿವಣ್ಣ ತಿಮ್ಲಾಪುರ ಬರೆದಿರುವ ‘ತೊಗಲ ಯೋಗಿ’ ಕವನ ಸಂಕಲನ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿದೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸುವರು. ಸಂಸ್ಕೃತಿ ಚಿಂತಕ ಡಾ.ನಟರಾಜ ಬೂದಾಳ್ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಅಗ್ರಹಾರ ಕೃಷ್ಣಮೂರ್ತಿ ಕವನ ಸಂಕಲನ ಬಿಡುಗಡೆ ಮಾಡುವರು.
ಕವನ ಸಂಕಲನ ಕುರಿತು ಡಾ.ಜಿ.ವಿ.ಆನಂದಮೂರ್ತಿ ಮಾತನಾಡುವರು. ವಿಶೇಷ ಆಹ್ವಾನಿತರಾಗಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಭಾಗವಹಿಸುವರು. ಅತಿಥಿಗಳಾಗಿ ಸಾಹಿತಿ ತುಂಬಾಡಿ ರಾಮಯ್ಯ, ಕುಲಸಚಿವೆ ನಾಹಿದಾ ಜಮ್ ಜಮ್, ಚರಕ ಆಸ್ಪತ್ರೆಯ ಡಾ.ಬಸವರಾಜು, ಸಾಮಾಜಿಕ ಹೋರಾಟಗಾರ ಡ್ಯಾಗೇರಹಳ್ಳಿ ವಿರೂಪಾಕ್ಷ, ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ.ಬಿ.ಆರ್.ರೇಣುಕಪ್ರಸಾದ್ ಭಾಗವಹಿಸುವರು.