ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ವತಿಯಿಂದ ಮಾರ್ಚ್ 20ರಂದು ಬೆಳಗ್ಗೆ 11ಗಂಟೆಗೆ ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಮೇಜರ್ ಅನಿಲ್ ಕುಮಾರ್ ವಹಿಸುವರು. ಕಲೇಸಂ ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು ಪ್ರಸ್ತಾವನೆ ಮಾತನಾಡುವರು. ಲೇಖಕಿ ದು.ಸರಸ್ವತಿ ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡುವರು.
ಕಲಾವಿದೆ ರೇಣುಕಾ ಕೆಸರುಮಡು ಪ್ರಶಸ್ತಿ ಪ್ರದಾನ ಮಾಡುವರು. ಜಾನಪದ ಹಾಡುಗಾರ್ತಿ ಕರಿಯಮ್ಮ ಅವರಿಗೆ ಸಾಧಕ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸರ್ಕಾರಿ ಪಾಲಿಟೆಕ್ನಿಕ್ ಕುಲಸಚಿವೆ ಡಿ.ವೀಣ ಉಪಸ್ಥಿತರಿರುವರು. ಕಲೇಸಂ ಉಪಾಧ್ಯಕ್ಷೆ ಸಿ.ಎ.ಇಂದಿರಾ ಅಭಿನಂದನಾ ನುಡಿಗಳನ್ನಾಡುವರು.


