Thursday, January 29, 2026
Google search engine
Homeಮುಖಪುಟಮಾರ್ಚ್ 28ರಂದು ‘ಜ್ಞಾನಸಿರಿ’ ಕ್ಯಾಂಪಸ್‌ನಲ್ಲಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಉದ್ಘಾಟನೆ

ಮಾರ್ಚ್ 28ರಂದು ‘ಜ್ಞಾನಸಿರಿ’ ಕ್ಯಾಂಪಸ್‌ನಲ್ಲಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಉದ್ಘಾಟನೆ

ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ಯಲ್ಲಿ ನಿರ್ಮಿಸಲಾಗಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ರಾಜ್ಯ ಸಣ್ಣ ನೀರಾವರಿ, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಮಾರ್ಚ್ 28ರಂದು ಬೆಳಗ್ಗೆ 10ಗಂಟೆಗೆ ಲೋಕಾರ್ಪಣೆಗೊಳಿಸಲಿದ್ದಾರೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮೋಶನ್ ಸೊಸೈಟಿ ಅನುದಾನದಲ್ಲಿ ಈ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗಿದೆ.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಗೃಹ ಸಚಿವ ಡಾ. ಜಿ. ಪರಮೇಶ್ವರ, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಸಹಕಾರ ಸಚಿವ ಕೆ. ಎನ್. ರಾಜಣ್ಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷರೂ ಆಗಿರುವ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್ ಭಾಗವಹಿಸುವರು.

ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ರೂ. 3.65 ಕೋಟಿ ವೆಚ್ಚದಲ್ಲಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಿದ್ದು, ಇದರಲ್ಲಿ ಒಳಾಂಗಣ ಮತ್ತು ಹೊರಾಂಗಣ ಪ್ರಾತ್ಯಕ್ಷಿಕೆಗಳು ಇರುತ್ತವೆ. ತುಮಕೂರಿನ ನಿರ್ಮಿತಿ ಕೇಂದ್ರವು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ವಿಜ್ಞಾನ ಕೇಂದ್ರಕ್ಕಾಗಿ ಬಿದರಕಟ್ಟೆ ‘ಜ್ಞಾನಸಿರಿ’ ಕ್ಯಾಂಪಸಿನಲ್ಲಿ ಐದು ಎಕರೆ ಜಾಗವನ್ನು ಮೀಸಲಿಡಲಾಗಿದೆ.

ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಕೇಂದ್ರಕ್ಕೆ ಭೇಟಿ ನೀಡಲು ಅವಕಾಶವಿರುತ್ತದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ವಿ.ಪದ್ಮನಾಭ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular