ಮ್ಯಾನಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಶುಕ್ರವಾರ ಸಂಭವಿಸಿದ ಭೂಕಂಪನದಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಭೂಕಂಪನ ರಿಕ್ಟರ್ ಮಾಪಕದಲ್ಲಿ 7.7ರಷ್ಟು ದಾಖಲಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಮ್ಯಾನಮಾರ್ ನಲ್ಲಿ ಬೃಹತ್ ಕಟ್ಟಡಗಳು ಧರೆ ಉರುಳಿವೆ. ಸಹಸ್ರಾರು ಮಂದಿ ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದು ಅವರನ್ನು ಹೊರ ತೆಗೆಯುವ ಕಾರ್ಯ ಭರದಿಂದ ಸಾಗಿದೆ.
ಭೂಕಂಪನದ ತೀವ್ರತೆಗೆ ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿದ್ದು ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮ್ಯಾನಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಭೂಕಂಪನದಲ್ಲಿ ಸಿಲುಕಿರುವ ಭಾರತೀಯರಿಗಾಗಿ ಸಹಾಯವಾಣಿಗಳನ್ನು ತೆರೆಯಲಾಗಿದೆ.