Wednesday, April 30, 2025
Google search engine
Homeಮುಖಪುಟಏ.1ರಿಂದ 5ರವರೆಗೆ ತುಂಗಭದ್ರಾ ಕಾಲುವೆಗೆ ನೀರು

ಏ.1ರಿಂದ 5ರವರೆಗೆ ತುಂಗಭದ್ರಾ ಕಾಲುವೆಗೆ ನೀರು

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ ಎಂದು ತಿಳಿಸಿದ್ದಾರೆ.

ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14ಟಿಎಂಸಿ ಅಗತ್ಯವಿದ್ದು, 3 ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಏಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು ಎಂದಿದ್ದಾರೆ.

ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು ಅಭಯ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular