Monday, April 14, 2025
Google search engine
Homeಮುಖಪುಟಡಾ.ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡಲು ಡಿಕೆಶಿ ಆಗ್ರಹ

ಡಾ.ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡಲು ಡಿಕೆಶಿ ಆಗ್ರಹ

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮಿಗಳ 118ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕೆಂದು ರಾಜನಾಥ್ ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಿದರು.

ಸಾವಿರಾರು ಮಕ್ಕಳಿಗೆ ಅನ್ನ ದಾಸೋಹ. ಅಕ್ಷರ ದಾಸೋಹದ ಮೂಲಕ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುತ್ತಿದ್ದಾರೆ. ಮಠದಲ್ಲಿ ನಡೆಯುತ್ತಿರುವ ಅನ್ನ ದಾಸೋಹ ಪ್ರೇರೇಪಿತರಾದ ಹಿಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದರು. ನಾನು ಆಗ ಸಚಿವನಾಗಿದ್ದೆ ಎಂದು ಸ್ಮರಿಸಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular