Saturday, April 26, 2025
Google search engine
Homeಮುಖಪುಟಸಿದ್ದರಾಮಯ್ಯ ದೆಹಲಿಗೆ-ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದರಾಮಯ್ಯ ದೆಹಲಿಗೆ-ಗರಿಗೆದರಿದ ರಾಜಕೀಯ ಚಟುವಟಿಕೆ

ಹನಿ ಟ್ರ್ಯಾಪ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದು ವಿದ್ಯಮಾನಗಳು ಕುತೂಹಲ ಮೂಡಿಸಿವೆ.

ಕಾಲು ನೋವಿನ ಕಾರಣಕ್ಕೆ ಸುಮಾರು ನಾಲ್ಕು ತಿಂಗಳಿನಿಂದ ದೆಹಲಿ ಯಾತ್ರೆ ಮುಂದೂಡುತ್ತಾ ಬಂದಿದ್ದ ಸಿದ್ದರಾಮಯ್ಯ ಅವರು ಬುಧವಾರ ಕರ್ನಾಟಕ ಭವನದ ನವೀಕೃತ ಕಟ್ಟಡ ಉದ್ಘಾಟನೆಗೆ ತೆರಳುತ್ತಿದ್ದು ಈ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ಈ ಮಾತುಕತೆಯ ಸಮಯದಲ್ಲಿ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ನಿಗಮ ಮಂಡಳಿ ನೇಮಕಾತಿ ವಿಚಾರ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಇದೆ ಸಮಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತಂತೆಯೂ ಚರ್ಚೆ ನಡೆಯಲಿದ್ದು ಅಲ್ಲಿಯವರೆಗೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿದ್ದು ಈ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬೇಡ ಎಂಬ ವಾದ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯಕ್ಕೆ ಖಾಲಿ ಇರುವ ಒಂದು ಸ್ಥಾನ ಭರ್ತಿಗೆ ಮಾತ್ರ ಆಸಕ್ತಿ ಹೊಂದಿದ್ದಾರೆ. ವಾಲ್ಮೀಕಿ ಹಗರಣದ ಹಿನ್ನೆಲೆಯಲ್ಲಿ ನಾಗೇಂದ್ರ ರಾಜೀನಾಮೆ ನೀಡಿದ್ದು ಆ ಸ್ಥಾನಕ್ಕೆ ಅವರನ್ನು ಮರಳಿ ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ಹೊಂದಿದ್ದು ಇದಕ್ಕೆ ಹೈಕಮಾಂಡ್ ಪಡೆಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. 

ಇದನ್ನು ಹೊರತುಪಡಿಸಿ ಜಾತಿವಾರು ಜನಗಣತಿ ಕುರಿತಾದ ಕಾಂತರಾಜು ಆಯೋಗದ ವರದಿ ಅನುಷ್ಠಾನ ಕುರಿತಂತೆ ರಾಹುಲ್ ಗಾಂಧಿ ಅವರ ಜೊತೆ ಪ್ರತ್ಯೇಕವಾಗಿ ಮಾತನಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.

ರಾಜ್ಯದಲ್ಲಿ ಮೀಸಲಾತಿ ಪಟ್ಟಿಯಲ್ಲಿ ತಮ್ಮನ್ನು ಸೇರ್ಪಡೆ ಮಾಡುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯ ಸೇರಿದಂತೆ ಹಲವು ಪ್ರಭಾವಿ ಸಮುದಾಯಗಳು ಒತ್ತಡ ಏರುತ್ತಿವೆ ಹಿಂದುಳಿದ ಸಮುದಾಯಕ್ಕೆ ಸೇರಿದ ಕೆಲವು ಜಾತಿಗಳು ತಮ್ಮ ಮೀಸಲಾತಿಯ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಮಂಡಿಸುತ್ತಿವೆ. ಈಗ ಇರುವ ಶೇಕಡ 50ರ ಮೀಸಲಾತಿ ಮಿತಿಯಲ್ಲಿ ಇದನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಕಾಂತರಾಜು ಆಯೋಗದ ವರದಿಯ ಶಿಫಾರಸುಗಳನ್ನು ಆದರಿಸಿ ಈ ಮೀಸಲಾತಿಯ ಪ್ರಮಾಣವನ್ನು ಶೇಕಡ 75 ಕ್ಕೆ ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಇದಕ್ಕೆ ರಾಹುಲ್ ಗಾಂಧಿ ಅವರ ಸಮ್ಮತಿ ಕೇಳಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೆ ವೇಳೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹನಿ ಟ್ರ್ಯಾಪ್ ಪ್ರಕರಣದ ಬಗ್ಗೆ ಯಾವ ರೀತಿಯ ನಡೆಸಬೇಕು ಎಂಬ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular