ತುಮಕೂರು ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ.
ಅಕ್ಕಿ ವ್ಯಾಪಾರಿ ರಾಜು ಹಾಗೂ ಪ್ರಭಾವತಿ ದಂಪತಿ ಪುತ್ರಿ ಶ್ರೀಲಕ್ಷ್ಮೀ ವಾಣಿಜ್ಯ ವಿಭಾಗದಲ್ಲಿ 596 ಅಂಕ ಪಡೆದು ರಾಜ್ಯದಲ್ಲೇ 4 ಸ್ಥಾನ ಪಡೆಯುವ ಮೂಲಕ ಕಾಲೇಜು ಹಾಗೂ ತುಮಕೂರು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾನಿಧಿ ಹಾಗೂ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎನ್.ಬಿ. ಪ್ರದೀಪ್‌ಕುಮಾರ್ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಅವರಿಗೆ ಪುಷ್ಪಗುಚ್ಛ ನೀಡಿ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.