Saturday, April 19, 2025
Google search engine
Homeಜಿಲ್ಲೆವಿಜೃಂಭಣೆಯಿಂದ ನಡೆದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸವ

ವಿಜೃಂಭಣೆಯಿಂದ ನಡೆದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸವ

ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ತುಮಕೂರು ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸದಲ್ಲಿ ಸುಡುವ ಬಿಸಿಲನ್ನು ಲೆಕ್ಕಿಸದೇ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಬ್ರಹ್ಮರಥೋತ್ಸವದ ಅಂಗವಾಗಿ ಆಂಜನೇಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಿದರು. ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು.

ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸವದ ಅಂಗವಾಗಿ ನಗರದಿಂದ ಶೆಟ್ಟಿಹಳ್ಳಿಗೆ ಹೋಗುವ ದಾರಿಯುದ್ಧಕ್ಕೂ ಹಾಗೂ ರಿಂಗ್ ರಸ್ತೆಯುದ್ದಕ್ಕೂ ಭಕ್ತಾದಿಗಳು ಪೆಂಡಾಲ್‌ಗಳನ್ನು ಹಾಕಿಕೊಂಡು ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದ್ದು ವಿಶೇಷವಾಗಿತ್ತು.

ರಥೋತ್ಸವದಲ್ಲಿ ತಹಶೀಲ್ದಾರ್ ರಾಜೇಶ್ವರಿ, ರೆವಿನ್ಯೂ ಇನ್ಸ್ಪೆಕ್ಟರ್ ಶಿವಾನಂದ ರೆಡ್ಡಿ, ಶೆಟ್ಟಿಹಳ್ಳಿ ಗ್ರಾಮ ಆಡಳಿತಾಧಿಕಾರಿ ರವಿಕುಮಾರ್, ದೇವಾಲಯದ ಆಗಮಿಕ ನರಸಿಂಹಭಟ್ಟ ಸೇರಿದಂತೆ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular