Friday, January 30, 2026
Google search engine
Homeಮುಖಪುಟಪೌರ ಕಾರ್ಮಿಕರ ಕಾಯಂಗೊಳಿಸಲು ಕಾರ್ಯ ನಡೆಯುತ್ತಿದೆ-ಸಿಎಂ ಸಿದ್ದರಾಮಯ್ಯ

ಪೌರ ಕಾರ್ಮಿಕರ ಕಾಯಂಗೊಳಿಸಲು ಕಾರ್ಯ ನಡೆಯುತ್ತಿದೆ-ಸಿಎಂ ಸಿದ್ದರಾಮಯ್ಯ

ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು. ಅವರ ಜೊತೆ ನಿಲ್ಲುವುದು ನಮ್ಮ ಬದ್ಧತೆಯಾಗಿದೆ. ಕೃಷಿಕರಿಗೆ ಶೇ.40, ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ.50 ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು ₹400 ಕೋಟಿ ವೆಚ್ಚದ ಕೃಷಿ ಯಂತ್ರಗಳು ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಅವರು ಮಾತನಾಡಿದರು.

ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗಾಗಿ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ.

ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡಲು ಶುರು ಮಾಡಿದೆವು ಎಂದರು.

ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ₹23,000 ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ.

ಪೌರ ಕಾರ್ಮಿಕರ ಸೇವೆ ಕಾಯಂಗೆ ಕೆಲಸ ನಡೆಯುತ್ತಿದೆ

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular