Thursday, January 29, 2026
Google search engine
Homeಮುಖಪುಟಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ- ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ ರವಾನೆ-ಸಿಎಂ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ- ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ ರವಾನೆ-ಸಿಎಂ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಸಿಎಂ ಪ್ರಾರ್ಥಿಸಿದ್ದಾರೆ.

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ ಎಂದು ಹೇಳಿದ್ದಾರೆ.

ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ನಿನ್ನೆ ಸಂಜೆಯೇ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular