Thursday, January 29, 2026
Google search engine
Homeಮುಖಪುಟಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ-ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ-ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ಸಂತಾಪ ಸಲ್ಲಿಸಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಉಗ್ರರ ದಾಳಿಗಳನ್ನು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು ಎಂದು ಹೇಳಿದ್ದಾರೆ.

ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸಂಪುಟ ಸಭೆಯು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular