Thursday, January 29, 2026
Google search engine
Homeಮುಖಪುಟಭಾರತೀಯರಿಗೆ ರಕ್ಷಣೆ ಕೊಡುವುದು ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತೀಯರಿಗೆ ರಕ್ಷಣೆ ಕೊಡುವುದು ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular