Thursday, January 29, 2026
Google search engine
Homeಮುಖಪುಟಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಬಿಜೆಪಿ ಆಗ್ರಹ

ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಬಿಜೆಪಿ ಆಗ್ರಹ

ಭಾರತದಲ್ಲಿ ಉಳಿದಿರುವ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ನಿರ್ದೇಶನ ನಿರ್ಲಕ್ಷಿಸಿ ಪಾಕ್ ಪ್ರಜೆಗಳನ್ನು ಗುರುತಿಸಿ ವಾಪಸ್ ಕಳಿಸಲು ಉದಾಸೀನ ಮಾಡುತ್ತಿರುವ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು.

ತುಮಕೂರು ನಗರಪಾಲಿಕೆ ಆವರಣದ ಡಾ.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಬಿಜೆಪಿ ಮುಖಂಡರು, ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಮ್ಮು-ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರು ಹಿಂದೂ ಪ್ರವಾಸಿಗರ ಹತ್ಯೆ ನಡೆಸಿದ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನಕ್ಕೆ ಉತ್ತರ ನೀಡಲು 5 ರಾಜತಾಂತ್ರಿಕ ಕ್ರಮ ಕೈಗೊಂಡಿದೆ. ಅದರಲ್ಲಿ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಘಟನೆ ನಡೆದ 48 ಗಂಟೆಗಳೊಳಗೆ ಅವರ ದೇಶಕ್ಕೆ ವಾಪಸ್ ಕಳಿಸಬೇಕು ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು. ಆದರೆ, ಕರ್ನಾಟಕ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಸರ್ಕಾರಗಳು ಈ ವಿಚಾರವನ್ನು ಉದಾಸೀನ ಮಾಡಿ ಪಾಕ್ ಪ್ರಜೆಗಳ ರಕ್ಷಣೆ ಮಾಡುತ್ತಿವೆ ಎಂದು ಟೀಕಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿದರು. ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರು ನಮ್ಮ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ಅಭದ್ರತೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನಿಗಳು ದೇಶ ಬಿಟ್ಟು ತೊಲಗಬೇಕು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ನಗರ ಅಧ್ಯಕ್ಷ ಧನುಷ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನವಚೇತನ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಮುಖಂಡರಾದ ಭೈರಣ್ಣ, ಟಿ.ಹೆಚ್.ಹನುಮಂತರಾಜು, ಸಿ.ಎನ್.ರಮೇಶ್, ವಿಷ್ಣುವರ್ಧನ್, ಪುಟ್ಟರಾಜು ಇದ್ಸರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular