ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.
ಮಹೇಶ್ ಜೋಷಿ ಅವರ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದುಕೊಂಡು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಸಾಹಿತಿಗಳು, ಪ್ರಗತಿಪರರಿಂದ ಆರೋಪ ಕೇಳಿಬಂದಿತ್ತು. ಜೋಶಿ ತೆಗೆದುಕೊಂಡ ನಿರ್ಧಾರಗಳಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಜೋಶಿ ಅವರಿಗೆ ನೀಡಲಾಗಿದ್ದ ಸಚಿವ ಸ್ಥಾನಮಾನ ಮತ್ತು ರಾಜ್ಯ ಸಚಿವರಿಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಹೀಗಾಗಿ ಇನ್ನು ಮುಂದೆ ಜೋಶಿ ಅವರಿಗೆ ಸಚಿವ ಸ್ಥಾನಮಾನ ಮತ್ತು ಸರ್ಕಾರದ ಸೌಲಭ್ಯಗಳು ಇರುವುದಿಲ್ಲ


