ಕಂಟೇನರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮೂವರು ವಾಚ್ ಮನ್ ಗಳು ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನಲ್ಲಿ ನಡೆದಿದೆ.
ಮೃತರನ್ನು 25 ವರ್ಷದ ರಾಜೇಶ್, 27 ವರ್ಷದ ಧನಂಜಯ್ ಮತ್ತು 23 ವರ್ಷದ ಧನುಷ್ ಎಂದು ಗುರುತಿಸಲಾಗಿದೆ.
ತುಮಕೂರು ತಾಲ್ಲೂಕು ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯ ಎಂ.ಇ.ಸೋಲಾರ್ ಪ್ಲಾಂಟ್ ನಲ್ಲಿ ಕೆಲಸ ಮುಗಿಸಿ ಬರುವಾಗ ಈ ಅವಘಡ ನಡೆದಿದೆ.
ಸ್ಥಳಕ್ಕೆ ಎಎಸ್ಫಿ ನಾಗರಾಜ್, ಡಿವೈಎಸ್ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸಿಪಿಐ ರಾಮ್ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.