Friday, July 18, 2025
Google search engine
Homeಮುಖಪುಟಖಾತೆ ಬದಲಾಯಿಸುವಂತೆ ಸಿಎಂಗೆ ಕೇಳಿಲ್ಲ-ಪರಮೇಶ್ವರ್

ಖಾತೆ ಬದಲಾಯಿಸುವಂತೆ ಸಿಎಂಗೆ ಕೇಳಿಲ್ಲ-ಪರಮೇಶ್ವರ್

ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಖಾತೆ ಬದಲಾವಣೆ ಕುರಿತಂತೆ ನಿಮಗೆ ಯಾರು ಹೇಳಿದರು. ಒಂದು ವೇಳೆ ನಿಮ್ಮ ಕಿವಿಗೆ ಬಿತ್ತು ಅಥವಾ ಯಾರೋ ಹೇಳಿದರು ಎಂಬ ಮಾತು ಬಂದಾಗ ನನ್ನನ್ನು ನೇರವಾಗಿ ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಲ್ಲವೆ. ಸುದ್ದಿ ಮಾಡುವ ಮೊದಲು ನನ್ನನ್ನು ನೇರವಾಗಿ ಕೇಳಬಹುದಲ್ಲವೇ ಎಂದರು.

ನಾನು 30 ವರ್ಷದಿಂದ ನಿಮ್ಮೊಂದಿಗೆ ಸಂಯಮದಿಂದ ನಡೆದುಕೊಂಡಿದ್ದೇನೆ. ನೀವು ಅಷ್ಟೇ ಗೌರವಿಸಿದ್ದೀರಿ. ಇದಕ್ಕೆ ನಾನು ಅಭಾರಿಯಾಗಿದ್ದೇನೆ. ವ್ಯಕ್ತಿಯ ವ್ಯಕ್ತಿತ್ವವನ್ನು ನಾಶ ಮಾಡುವುದು ಒಳ್ಳೆಯದಾಗಿ ಕಾಣಿಸುವುದಿಲ್ಲ, ಶೋಭೆ ತರುವುದಿಲ್ಲ ಎಂದರು.

ನಾನು ನನ್ನ ಶ್ರೀಮತಿಯವರು ಸೇರಿದಂತೆ ಯಾರ ಬಳಿಯೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸುವಂತೆ ಆಪ್ತರ ಬಳಿ ಹೇಳಿದರು, ಮುಖ್ಯಮಂತ್ರಿಯವರ ಬಳಿ ಕೇಳಿದರು. ಅವರು ಸುಮ್ಮನೆ ಇರಿ ಎಂದು ಎಂದೆಲ್ಲ ಸುದ್ದಿ ಮಾಡಲಾಗಿದೆ. ಇದನ್ನು ಯಾರು ಹೇಳಿದರು. ಸುದ್ದಿ ಮಾಡುವ ಮೊದಲೇ ಸ್ಪಷ್ಟನೆ ಪಡೆದುಕೊಳ್ಳಬೇಕಿತ್ತು ಎಂದು ಹೇಳಿದರು.

ನಮ್ಮನ್ನು ಅಭಿಮಾನಿಗಳು, ಜನ ಅನುಕರಿಸುವವರು ಇದ್ದಾರೆ. ಕ್ಷೇತ್ರದ ಮತದಾರರು ಏನೆಂದುಕೊಳ್ಳುತ್ತಾರೆ. ಮುಂದೆ ಈ ರೀತಿ ಊಹಾಪೋಹಾ ಸುದ್ದಿ ನಿಮ್ಮ ಕಿವಿಗೆ ಬಿದ್ದಾಗ ನನ್ನನ್ನು ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದು ಎಂದರು.

ನಾನು ಯಾವತ್ತು ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಬೆಂಗಳೂರಿನಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಇಂತಹ ಘಟನೆಗಳಾಗಬಾರದು. ಈ ಘಟನೆಯಿಂದ ನಾವು ನೋವನ್ನು ಅನುಭವಿಸುತ್ತಿದ್ದೇವೆ. ಇಂತಹ ಸವಾಲುಗಳನ್ನು ಎದುರಿಸಬೇಕು. ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರು ಸೇರಿದಂತೆ ಯಾರ ಬಳಿಯೂ ಮಾತನಾಡೇ ಇಲ್ಲ. ಇದೆಲ್ಲ ಸತ್ಯಕ್ಕೆ ದೂರವಾಗಿದ್ದು. ಈ ವಿಚಾರವನ್ನು ಯಾರು ಕೂಡ ಗಣನೆಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.
ಕಾಲ್ತುಳಿತ ಘಟನೆಯ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ.ಕುನ್ಹಾ ಅವರ ಏಕವ್ಯಕ್ತಿ ಆಯೋಗಕ್ಕೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡುತ್ತಾರೆ. ನಾವು ಹೇಳಿಕೆ ಕೊಟ್ಟರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ. ತನಿಖೆ ವೇಳೆ ನಮ್ಮನ್ನು ಕೇಳಿದರೆ ಹೇಳುತ್ತೇವೆ. ಈಗ ಹೇಳಿಕೆ ನೀಡಿದರೆ ತನಿಖೆಯ ದಿಕ್ಕು ಬೇರೆ ಕಡೆ ಹೋಗುತ್ತದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular