Thursday, January 29, 2026
Google search engine
Homeಜಿಲ್ಲೆತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ವರ್ಗಾವಣೆ

ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ವರ್ಗಾವಣೆ

ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ನಾಹಿದಾ ಜಮ್ ಜಮ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಯಾರನ್ನೂ ವರ್ಗಾವಣೆ ಮಾಡಲಾಗಿಲ್ಲ.

ತುಮಕೂರು ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಇವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ ನಾಹಿದಾ ಜಮ್ ಜಮ್ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ತುಮಕೂರು ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಗೌರವ್ ಕುಮಾರ್ ಶೆಟ್ಟಿ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಚ್.ಕೇಶವಪ್ರಸಾದ್, ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular