ಸೋಲಾರ್ ಇರ್ಕಾನ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಹಾಗೂ ಕೆಎಸ್‌ಸಿ ಕಂಪನಿಯ ಸೋಲಾರ್ ಘಟಕದ ಉಪಸ್ಥಾವರದಲ್ಲಿ ವಿದ್ಯುತ್ ಸರಬರಾಜು ಆಗುವ ಕೇಬಲ್ ಬ್ಲಾಸ್ಟ್ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಇಂಟೂರಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಇಂಟೂರಾಯನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಸೋಲಾರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ ಟೆಕ್ನಿಷಿಯನ್‌ಗಳಾದ ಮಹೇಂದ್ರ, ಚೇತನ್, ನಾಗೇಂದ್ರ, ಮಾಂತೇಶ್ ಎಂಬ ನಾಲ್ವರು ಕೆಲಸ ನಿರ್ವಹಿಸುತ್ತಿದ್ದರು.
ಈ ವೇಳೆ ವಿದ್ಯುತ್ ಕೇಬಲ್ ಸ್ಪೋಟಗೊಂಡು ಕಾರ್ಮಿಕರಿಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳದಲ್ಲೇ ಕೆಲಸ ಮಾಡುತ್ತಿದ್ದ ಇತರೆ ಕಾರ್ಮಿಕರು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ನಾಗೇಂದ್ರ ಮತ್ತು ಮಾಂತೇಶ್ ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ರವಾನಿಸಲಾಗಿದೆ.
ಮುಂದೆ ಇಂತಹ ಘಟನೆಗಳು ಜರುಗದಂತೆ ಸೋಲಾರ್ ಘಟಕ ಕಂಪನಿಯವರು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


