Thursday, January 29, 2026
Google search engine
Homeಮುಖಪುಟಸುಳ್ಳು ಸುದ್ದಿಯಂತಹ ಸವಾಲುಗಳ ಮುಂದೆ ಮಾಧ್ಯಮ ಕ್ಷೇತ್ರದಲ್ಲಿ ನೈತಿಕತೆ ಅಗತ್ಯ

ಸುಳ್ಳು ಸುದ್ದಿಯಂತಹ ಸವಾಲುಗಳ ಮುಂದೆ ಮಾಧ್ಯಮ ಕ್ಷೇತ್ರದಲ್ಲಿ ನೈತಿಕತೆ ಅಗತ್ಯ

ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು.

ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ‌ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ ಇಂಪ್ರೆಷನ್ -2025  ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ. ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದರು.

ಪತ್ರಕರ್ತರಾಗುವವರು ಪೂರ್ವಾಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು.  ಹೀಗಾದಾಗ ಮಾತ್ರ ಸಾಮಜಿಕ‌ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ. ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದು ಹೇಳಿದರು.

ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ. ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗೆ ಧಾವಿಸಿ ಬಂದಿದ್ದೇವೆ ಎಂದರು. ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, clickbait, ದ್ವೇಷ ಭಾಷೆ ಇತ್ಯಾದಿಗಳ ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ ಜಗತ್ತಿನ ಮುಂದಿಟ್ಟಿದೆ. ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ ಜೊತೆಗೆ ಕಲಿಸಬೇಕಾಗಿದೆ ಎಂದು ತಿಳಿಸಿದರು.

ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿದ್ದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶ ಖಾನಂ, ಕಾರ್ಯದರ್ಶಿ ಸಹನಾ ಎಂ, ಸಿಂಡಿಕೇಟ್ ಸದಸ್ಯ ಮನೋಜ್, ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಸತೀಶ್ ಗೌಡ, ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ದಾಕ್ಷಾಯಿಣಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular