ಎರಡೂವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ತಮ್ಮ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂಬ ಚರ್ಚೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಕೈಯಲ್ಲಿದೆ’ ಎಂದು ಹೇಳಿದರು.
ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಯಾರು ಹೇಳಲಾಗದು. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಮಾಧ್ಯಮಗಳಲ್ಲಿ ಬರುತ್ತಿರುವುದು ನಿಮ್ಮ ಕಲ್ಪನೆ ಮಾತ್ರ’ ಎಂದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಶಾಸಕರು ಏನು ಹೇಳುತ್ತಾರೆ, ಜೊತೆಗೆ ಏನೇನು ನಡೆದಿದೆ ಎಂದು ಅವರು ಕೇಳುತ್ತಾರೆ. ಅದನ್ನು ನೋಡಿಕೊಂಡು ಮುಂದೇನು ಮಾಡಬೇಕೆಂದು ನೋಡೋಣ’ ಎಂದು ಹೇಳಿದರು.
ಸಚಿವರು, ಶಾಸಕರ ವಿಭಿನ್ನ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ, ‘ಅವರೆಲ್ಲರ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ. ನಾನು ಉತ್ತರ ಕೊಡುವುದು ಎಐಸಿಸಿ ಮಟ್ಟದ್ದಕ್ಕೆ ಮಾತ್ರ. ಇಲ್ಲಿಯ ಪ್ರತಿಯೊಂದಕ್ಕೂ ಉತ್ತರ ಕೊಡಲು ಹೋದರೆ, ಸಾಕಷ್ಟು ವಿಚಾರಗಳಿವೆ’ ಎಂದು ತಿಳಿಸಿದರು.
ಪರಾಮರ್ಶೆ:
‘ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಮಾಧ್ಯಮಗಳಲ್ಲಿ ಬರುತ್ತಿರುವುದು ನಿಮ್ಮ ಕಲ್ಪನೆ ಮಾತ್ರ’ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪರಾಜಿತ ಅಭ್ಯರ್ಥಿಗಳನ್ನು ಕೂಡ ಸಭೆಗೆ ಕರೆಯುತ್ತೇವೆ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆ. ಬಳಿಕ ಸಿಎಂ, ಡಿಸಿಎಂ ಜೊತೆಗೂ ಅಭಿವೃದ್ಧಿ ವಿಚಾರವಾಗಿ ಮಾತನಾಡುತ್ತೇವೆ ಎಂದು ತಿಳಿಸಿದರು.


