ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೃಢವಾಗಿ ಹೇಳಿದ್ದಾರೆ.
ನಂದಿಗಿರಿಧಾಮದಲ್ಲಿ ಹಮ್ಮಿಕೊಂಡಿರುವ ಸಚಿವ ಸಂಪುಟ ಸಭೆಗೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
ಬಿಜೆಪಿಯವರು ನೀವು ಬೇಗ ಅಧಿಕಾರದಿಂದ ಇಳಿಯಲಿದ್ದೀರಿ ಎಂದು ಹೇಳುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಬಿಜೆಪಿಯವರು ನಮ್ಮ ಹೈಕಮಾಂಡಾ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.
ಅಶೋಕ ನಮ್ಮ ಹೈಕಮಾಂಡೇ? ನಾರಾಯಣಸ್ವಾಮಿ ನಮ್ಮ ಹೈಕಮಾಂಡೇ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.


