ತುಮಕೂರಿನ ಹಿರಿಯ ವಕೀಲ ಹಾಗೂ ಜಿಲ್ಲಾ ವಕೀಲರ ವಿವಿಧೋದ್ದೇಶ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ನವೀನ್ ನಾಯಕ್ ಮತ್ತು ಪ್ರತಿಮಾ ದಂಪತಿಯ ಪುತ್ರಿ ನವ್ಯಾ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಬೆಂಗಳೂರು ಇನ್‌ಸ್ಟಿಟೂಪ್ ಆಫ್ ಟೆಕ್ನಾಲಜಿ ಕಾಲೇಜಿನ ಇನ್ಫರ‍್ಮೇಷನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 3ನೇ ರ‍್ಯಾಂಕ್ ಗಳಿಸಿದ್ದಾರೆ.
ಜು.4ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಕುಲಪತಿಗಳಿಂದ ನವ್ಯಾ ರ್ಯಾಂಕ್ ಪದವಿ ಸರ್ಟಿಫಿಕೇಟ್ ಪಡೆದರು. ನಿರಂತರ ಅಧ್ಯಯನ ಮತ್ತು ತಂದೆ ತಾಯಿಯ ಪ್ರೋತ್ಸಾಹದಿಂದ ಇನ್ಫರ್ಮೇಷನ್ ಸೈನ್ಸ್ ಇಂಜಿನಿಯರಿಂಗ್ ನಲ್ಲಿ 3ನೇ ರ‍್ಯಾಂಕ್ ಪಡೆದಿದ್ದೇನೆ ಎಂದು ನವ್ಯಾ ತಿಳಿಸಿದ್ದಾರೆ.


