ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಲನಚಿತ್ರ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.
ಸುಪ್ರೀಂಕೋರ್ಟ್ ನ್ಯಾಂiÀiಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಆರ್. ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ಅದು ಹಲವು ದೋಷಗಳಿಂದ ಕೂಡಿದೆ ಎಂದು ತಿಳಿಸಿದೆ.
ನಾವು ಎಲ್ಲವನ್ನೂ ಪರಿಗಣಿಸಿದ್ದೇವೆ. ಜಾಮೀನು ಮಂಜೂರು ಮತ್ತು ರದ್ದತಿ ಎರಡೂ ವಿಷಯದಲ್ಲಿ ಹೈಕೋರ್ಟ್ ಆದೇಶವು ಗಂಭೀರ ಲೋಪಗಳಿಂದ ಕೂಡಿದೆ ಎಂಬುದು ಸ್ಪಷ್ಟವಾಗಿದೆ. ಯಾಂತ್ರಿಕವಾಗಿ ತೀರ್ಪು ನೀಡಲಾಗಿದೆ. ಜೊತೆಗೆ ಹೈಕೋರ್ಟ್ ವಿಚಾರಣೆಯ ಪೂರ್ವ ಹಂತದಲ್ಲಿ ತೀರ್ಪು ನೀಡಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದರು.
ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಲಾಗಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂಗ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗಿದೆ. ಈ ಹಂತದಲ್ಲಿ ಜೈಲು ಸೂಪರಿಂಟೆಡೆAಟ್ ಅವರನ್ನು ಅಮಾನತು ಮಾಡಬೇಕಿತ್ತು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಈ ತೀರ್ಪು ಹೈತಿಹಾಸಿಕ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದ್ದು, ಕೂಡಲೇ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಜೈಲಿಗೆ ಕಳಿಸಬೇಕೆಂದು ಆದೇಶ ನೀಡಿದೆ.


