ತನ್ನ ಇಬ್ಬರು ಮಕ್ಕಳ ಕತ್ತು ಕೊಯ್ದು ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ನಡೆದಿದೆ.
ಒಂದೂವರೇ ವರ್ಷದ ಹೆಣ್ಣುಮಗು ಹಾಗೂ ನಾಲ್ಕು ವರ್ಷದ ಗಂಡು ಮಗುವಿನ ಕತ್ತು ಕೊಯ್ದು ನಂತರ ತಾಯಿ ಸರಿತಾ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡ ಸಂತೋಷ್ ಲಗೇಜ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸರಿತಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.


