ಮಹಾತ್ಮಗಾಂದಿ ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ. ಅವರ ಮತ್ತು ಕಾಂಗ್ರೆಸ್ ನ ವಿಚಾರಧಾರೆಗಳಿಗೂ ಹೊಂದಾಣಿಕೆ ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ ತಿಳಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಹಾತ್ಮಗಾಂಧೀಜಿ ಅಹಿಂಸಾ ತತ್ವವನ್ನು ಬೋಧಿಸಿದರು. ಅದು ಇಡೀ ವಿಶ್ವಕ್ಕೆ ಅನ್ವಯವಾಗುತ್ತದೆ. ನೆಲ್ಸನ್ ಮಂಡೇಲ ಕೂಡ ಗಾಂಧೀಜಿ ಅವರ ತತ್ವಗಳಿಗೆ ಮಾರುಹೋಗಿದ್ದರು. ಪತ್ರಿ ದಿನವೂ ಗಾಂಧೀಜಿ ಅವರ ವಿಚಾರಗಳನ್ನು ಅರ್ಥ ಮಾಡಿಕೊಂಡು ಮುಂದೆ ಸಾಗುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದರು.
ಇಂದು ಮಹಾತ್ಮಗಾಂಧಿ ಅವರ ವಿಚಾರಗಳನ್ನು ತಿಳಿದುಕೊಳ್ಳೋಣ. ಅದರಂತೆ ನಡೆಯೋಣ, ಶಾಂತಿ, ಸಹಬಾಳ್ವೆಯಿಂದ ನಾವೆಲ್ಲ ಬದುಕಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಹೀಗಾಗಿ ಕಾಂಗ್ರೆಸ್ ನ ಪ್ರತಿಯೊಂದು ಕಾರ್ಯಕ್ರಮ ಇದುವರೆಗೂ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.
16 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ
ದೇಶಾದ್ಯಂತ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ ನಡೆಯುತ್ತಿದೆ. ಹಾಗಾಗಿ ರಾಜ್ಯದಲ್ಲೂ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುವುದು. ಈಗಾಗಲೇ 16 ಮಂದಿ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಿ ಹೊಸಬರನ್ನು ನೇಮಕ ಮಾಡಲು ಸಿದ್ದತೆ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಎನ್ಎಸ್ ಯುಐ ಅಧ್ಯಕ್ಷ ಕೀರ್ತಿ ಗಣೇಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಇದ್ದರು.


