Saturday, November 8, 2025
Google search engine
Homeಮುಖಪುಟಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ-ಡಾ.ಜಿ.ಪರಮೇಶ್ವರ್

ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ-ಡಾ.ಜಿ.ಪರಮೇಶ್ವರ್

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿಯವರ 156ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಸಚಿವರು, ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಸರಳ ಜೀವನ, ಅಹಿಂಸೆ, ಸತ್ಯ, ಶಾಂತಿ, ತತ್ವಾದರ್ಶಗಳು ಸೂರ್ಯ-ಚಂದ್ರ ಇರುವವರೆಗೂ ಪ್ರಸ್ತುತವಾಗಿರುತ್ತವೆ. ಈ ಮಹನೀಯರ ತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಗಾಂಧೀಜಿಯವರಲ್ಲಿದ್ದ ನಡೆ-ನುಡಿ, ಬದ್ಧತೆ, ದೂರದೃಷ್ಟಿ ಗುಣಗಳು ಪ್ರಪಂಚದ ಯಾವುದೇ ದೇಶದ ನಾಯಕರಿಗೆ ಹೋಲಿಸಲು ಸಾಧ್ಯವಿಲ್ಲ. ಅವರ ಹುಟ್ಟು, ವಿದ್ಯಾಭ್ಯಾಸ, ದೇಶದ ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟಗಳ ಕುರಿತು ಪುಸ್ತಕಗಳಿಂದ ತಿಳಿದುಕೊಂಡಿದ್ದೇವೆ. ಸುಮಾರು 2500 ವರ್ಷಗಳ ಹಿಂದೆ ಭಗವಾನ್ ಬುದ್ಧನು ಸತ್ಯಾನ್ವೇಷಣೆಗಾಗಿ ತನ್ನ ಚಕ್ರವರ್ತಿ ಸ್ಥಾನವನ್ನೇ ತ್ಯಾಗ ಮಾಡಿದಂತೆ ಗಾಂಧೀಜಿಯವರೂ ಸಹ ಸತ್ಯ, ಅಹಿಂಸೆ, ಶಾಂತಿ, ದೇಶದ ಸ್ವಾತಂತ್ರö್ಯ ಹೋರಾಟಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು ಎಂದು ಹೇಳಿದರು.
ಸತ್ಯದ ಮಾರ್ಗ ಪ್ರತಿಯೊಬ್ಬರ ಸಂಗಾತಿಯಾಗಬೇಕು. ಇತ್ತೀಚೆಗೆ ಸಮಾಜದಲ್ಲಿ ಸತ್ಯವನ್ನು ದುರ್ಬಲಗೊಳಿಸಲಾಗುತ್ತಿರುವುದು ವಿಪರ್ಯಾಸ. ಸತ್ಯದ ಮೇಲೆ ಸಮಾಜ ನಿಂತಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರಲ್ಲದೆ, ಯಾರ ಮನಸ್ಸಿಗೂ ನೋವುಂಟು ಮಾಡಬಾರದೆಂಬ ಅವರ ಅಹಿಂಸಾ ಮಾರ್ಗವನ್ನು ಸಂಯುಕ್ತ ರಾಷ್ಟçಗಳು ಒಪ್ಪಿಕೊಂಡು ಗಾಂಧೀ ಜಯಂತಿ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಅಂತರಾಷ್ಟಿçÃಯ ಅಹಿಂಸಾ ದಿನವನ್ನಾಗಿ ಆಚರಿಸುತ್ತಿದ್ದು, ಗಾಂಧೀಜಿ ನಮ್ಮವರು ಎನ್ನಲು ಹೆಮ್ಮೆಯಾಗುತ್ತಿದೆ ಎಂದು ನುಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾರ ನಂಬಿಕೆ ಇಟ್ಟಿದ್ದ ಗಾಂಧೀಜಿ ದೇಶದ ಪ್ರತಿಯೊಬ್ಬ ಪ್ರಜೆಯೂ ಯಾವುದೇ ಜಾತಿ/ಧರ್ಮವಿರಲಿ ಮೂಲತಃ ಭಾರತೀಯನಾಗಿರಬೇಕು. ದೇಶ ಕಟ್ಟುವಲ್ಲಿ ಪ್ರತೀ ಪ್ರಜೆಯ ಪಾತ್ರವಿರಬೇಕೆಂದ ಅವರು, ಅವರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ನಮ್ಮ ದೇಶದ ಅಡಿಪಾಯ ಮತ್ತಷ್ಟು ಭದ್ರವಾಗುತ್ತದೆ ಎಂದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಧುಕುಮಾರ್ ನಿರೂಪಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ರಾಜಶೇಖರ್ ವಂದಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್‌ಪಿ ಕೆ.ವಿ. ಅಶೋಕ್, ಜಿ.ಪಂ. ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಎಡಿಸಿ ಡಾ. ಎನ್. ತಿಪ್ಪೇಸ್ವಾಮಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ನಾಗಣ್ಣ, ವಾರ್ತಾ ಇಲಾಖೆಯ ಆರ್. ರೂಪಕಲಾ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular