Friday, November 7, 2025
Google search engine
Homeಮುಖಪುಟವೈಜ್ಞಾನಿಕತೆ ಬೆಳೆಸಿಕೊಂಡರೆ ಸಮಾಜದ ಪ್ರಗತಿ ಸಾಧ್ಯ-ಸಿಎಂ

ವೈಜ್ಞಾನಿಕತೆ ಬೆಳೆಸಿಕೊಂಡರೆ ಸಮಾಜದ ಪ್ರಗತಿ ಸಾಧ್ಯ-ಸಿಎಂ

ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣವು ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ ಎಂದು ತಿಳಿಸಿದರು.

ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ‌ ಎಂದರು.

ಬಹಳ ಹಿಂದೆಯೇ ಬಸವಾದಿ ಶರಣರು ಮೌಢ, ಕಂದಾಚಾರಗಳ ವಿರುದ್ಧದ ಹೋರಾಟಕ್ಕೆ ಕರೆ ನೀಡಿದರು. ಆದರೆ, ಇವತ್ತಿಗೂ ಮೌಢ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಢ್ಯವನ್ನು ಬಿತ್ತುತ್ತಾರೆ ಎಂದು ಹೇಳಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಡ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಢ್ಯ ಮತ್ತು ಮೌಢ್ಯ ಬಿತ್ತುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು.

52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಈ ಕೊಡಲು ಸಿದ್ಧವಿದೆ ಎಂದು ಭರವಸೆ ನೀಡಿದರು.

ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ವಿಶ್ವವಿದ್ಯಾಲಯದ ಉಪ ಕುಲಪತಿ ಫ್ರೊ.ಫಜೀಹ ಸುಲ್ತಾನ, ಸಿಬ್ಬಂದಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular